Home ನಮ್ಮ ಜಿಲ್ಲೆ ಕೋಲಾರ ಕಾಂಗ್ರೆಸ್‌ನವರ ಹೇಳಿಕೆಗೆ ನಾನು ಉತ್ತರ ಕೊಡಲ್ಲ

ಕಾಂಗ್ರೆಸ್‌ನವರ ಹೇಳಿಕೆಗೆ ನಾನು ಉತ್ತರ ಕೊಡಲ್ಲ

0

ಕೋಲಾರ: ಕೋಲಾರದಲ್ಲಿ ಗುರುವಾರ ನಡೆದ ಗಣರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಮುನಿರತ್ನ ಧ್ವಜಾರೋಹಣ ನೆರವೇರಿಸಿದರು, ಕಾರ್ಯಕ್ರಮದ ನಂತರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಉಸ್ತುವಾರಿ ಸಚಿವ ಮುನಿರತ್ನ
ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ವಿಚಾರ ಬಗ್ಗೆ ಚರ್ಚೆ ಮಾಡುವುದು ಬೇಡ ಎಂದು ಹೇಳಿದರು. ಚುನಾವಣೆ ಸ್ಪರ್ಧೆ ಬಗ್ಗೆ ಯಾರು ಎಲ್ಲಿ ಬೇಕಾದರೂ ಹೇಳಬಹುದು. ಆದರೆ ಸ್ಪರ್ಧೆ ಮಾಡಿದಾಗ ಮಾತ್ರ ಗೊತ್ತಾಗುತ್ತದೆ ಎಂದು ಸಚಿವರು ಹೇಳಿದ್ದಾರೆ. ಈ ಬಾರಿ ಬಜೆಟ್‌ನಲ್ಲಿ ಮಾವು ಸಂಸ್ಕರಣಾ ಘಟಕ, ಜಿಲ್ಲೆಗೆ ಮೆಡಿಕಲ್‌ ಕಾಲೇಜು ನೀಡಲಾಗುವುದು. ಕಾಂಗ್ರೆಸ್‌ನವರ ಹೇಳಿಕೆಗೆ ನಾನು ಉತ್ತರ ಕೊಡಲ್ಲ ಎಂದು ಸಚಿವರು ಹೇಳಿದ್ದಾರೆ. ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಉತ್ತಮ ಆಡಳಿತ ಕೊಡುತ್ತಿವೆ. ರೈತರ ಬಗ್ಗೆ ೨೦ ಗಂಟೆ ಯೋಚನೆ ಮಾಡುತ್ತೇವೆ. ರೈತರಿಗಾಗಿ ನಾವು ಸಾಕಷ್ಟು ಯೋಜನೆಗಳನ್ನ ಕೊಡುತ್ತೇವೆ. ಬೇಡಿಕೆ ಇದ್ದಷ್ಟು ಅನುದಾನವನ್ನ ರೈತರಿಗೆ ಕೊಡುತ್ತಿದ್ದೇವೆ. ಭ್ರಷ್ಟಾಚಾರವನ್ನು ಮಾಡಿರುವವರೇ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ ಎಂದು ಡಿಕೆಶಿ ಮಾತಿಗೆ ವ್ಯಂಗ್ಯವಾಗಿ ಉತ್ತರಿಸಿದ ಸಚಿವರು ೪೦ ಪರ್ಸೆಂಟ್ ಕುರಿತು ಮಾತನಾಡುವವರು ನ್ಯಾಯಾಲಯಕ್ಕೆ ಬಂದು ಉತ್ತರ ಕೊಡಲಿ ಎಂದಿದ್ದಾರೆ .

ಕಾಂಗ್ರೆಸ್‌ನವರ ಹೇಳಿಕೆಗೆ ನಾನು ಉತ್ತರ ಕೊಡಲ್ಲ

Exit mobile version