ಕಾಂಗ್ರೆಸ್ ಅಭ್ಯರ್ಥಿಯಾಗಿ ಅಭಿಷೇಕ್ ಮನು ಸಿಂಘ್ವಿ ನೇಮಕ

0
15

ನವದೆಹಲಿ: ತೆಲಂಗಾಣದಲ್ಲಿ ನಡೆಯಲಿರುವ ರಾಜ್ಯಸಭಾ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯಾಗಿ ಹಿರಿಯ ನಾಯಕ ಅಭಿಷೇಕ್ ಮನು ಸಿಂಘ್ವಿ ಅವರನ್ನು ಬುಧವಾರ ನಾಮನಿರ್ದೇಶನ ಮಾಡಿದೆ.


ಬಿಆರ್‌ಎಸ್‌ ಸಂಸದ ಕೆ.ಕೇಶವ ರಾವ್‌ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರಿದ ನಂತರ ಆ ಸ್ಥಾನ ತೆರವಾಗಿತ್ತು. ತೆಲಂಗಾಣದಿಂದ ರಾಜ್ಯಗಳ ಪರಿಷತ್ತಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಭಿಷೇಕ್ ಮನು ಸಿಂಘ್ವಿ ಅವರ ಉಮೇದುವಾರಿಕೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous articleಶಾರ್ಟ್ ಸರ್ಕ್ಯೂಟ್: 78 ಕುರಿಗಳ ಸಜೀವ ದಹನ
Next articleಸ್ವಾತಂತ್ರ್ಯ ದಿನಾಚರಣೆ ಸಿದ್ಧತೆ ವೇಳೆ ವಿದ್ಯುತ್ ತಗುಲಿ ಇಬ್ಬರು ಸಾವು