ಬೆಂಗಳೂರು: ವಿಧಾನ ಪರಿಷತ್ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರಿಗೆ ಇಂದು ಬಿ ಫಾರ್ಮ್ ನೀಡಲಾಗಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಪೋಸ್ಟ್ ಮಾಡಿರುವ ಅವರು ವಿಧಾನ ಪರಿಷತ್ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಪುಟ್ಟಣ್ಣ ಅವರಿಗೆ ಇಂದು ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆಯವರೊಂದಿಗೆ ಬಿ ಫಾರ್ಮ್ ನೀಡಿ, ಶುಭ ಹಾರೈಸಿದೆ ಎಂದಿದ್ದಾರೆ.