ಕಾಂಗ್ರೆಸ್ ಕಾರ್ಯಕರ್ತನಿಗೆ ಚಾಕು ಇರಿತ

0
18
ಚಾಕು

ದಾವಣಗೆರೆ: ವಿಧಾನಸಭಾ ಚುನಾವಣೆ ಗೆಲುವಿನ ಸಂಭ್ರಮಾಚರಣೆ ವೇಳೆ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನಿಗೆ ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ಜಿಲ್ಲೆ ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿಯಲ್ಲಿ ನಡೆದಿದೆ.
ಮಲ್ಲಿಗೇನಹಳ್ಳಿ ಗ್ರಾಮದ ಮಧು(24) ಹಲ್ಲೆಗೊಳಗಾದ ಕಾಂಗ್ರೆಸ್ ಕಾರ್ಯಕರ್ತ. ಹೊನ್ನಾಳಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಡಿ.ಜಿ. ಶಾಂತನಗೌಡ ಗೆದ್ದ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದ ವೇಳೆ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಗಲಾಟೆಯಾಗಿದೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತ ಮಧು ಎನ್ನುವವನಿಗೆ ಚಾಕುವಿನಿಂದ ಇರಿಯಲಾಗಿದ್ದು, ಮಾಜಿ ಶಾಸಕ ರೇಣುಕಾಚಾರ್ಯ ಬೆಂಬಲಿಗರಾದ ಪ್ರವೀಣ್, ಪ್ರಕಾಶ್ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಈ ಬಗ್ಗೆ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleಕಜಕಿಸ್ತಾನದಿಂದ ಬೆದರಿಕೆ ಕರೆ: ಈಶ್ವರಪ್ಪ ದೂರು
Next articleಸಿದ್ದರಾಮಯ್ಯ ರಹಸ್ಯ ಸಭೆ