SK Home Ad
Home ಅಪರಾಧ ಕಾಂಗ್ರೆಸ್ ಕಾರ್ಯಕರ್ತನ ಭೀಕರ  ಹತ್ಯೆ

ಕಾಂಗ್ರೆಸ್ ಕಾರ್ಯಕರ್ತನ ಭೀಕರ  ಹತ್ಯೆ

0
180

ಗದಗ: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಳಿ ಜಮೀನೊಂದರಲ್ಲಿ ಮರಕ್ಕೆ ನೇತು ಹಾಕಿದ ಸ್ಥಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಶವ ನೇತಾಡುತ್ತಿದೆ. ಗ್ಯಾರಂಟಿ ಸಮಾವೇಶದ ಸಂದರ್ಭದಲ್ಲೇ ಕಾಂಗ್ರೆಸ್ ಕಾರ್ಯಕರ್ತನ ಭೀಕರ ಹತ್ಯೆ ನಡೆದಿದೆ
ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಪ್ರಮುಖ ಕಾರ್ಯಕರ್ತ ಡೋಣಿ ಗ್ರಾಮದ ಶರಣಪ್ಪ ಸಂದಿಗೌಡ್ರ ಕೊಲೆಗೀಡಾದ ವ್ಯಕ್ತಿ.ಬೈಕ್‌ನಲ್ಲಿ ಹೋಗುತ್ತಿದ್ದ ಶರಣಪ್ಪರನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಹಲ್ಲೆ ಮಾಡಿ, ನಂತರ ಅಲ್ಲಿದ್ದ ಮರಕ್ಕೆ ಹಗ್ಗದಿಂದ ಕಟ್ಟಿ ಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮರದಲ್ಲಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.