ಕಾಂಗ್ರೆಸ್ ‘ಚೊಂಬು’ ಹಿಡಿದು ಪ್ರತಿಭಟನೆ

0
18

ಬೆಂಗಳೂರು: ನಗರದಲ್ಲಿ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜಿವಾಲ ನೇತೃತ್ವದಲ್ಲಿ ‘ಚೊಂಬು ಹಿಡಿದು’ ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯದಿಂದ ಆಯ್ಕೆಯಾದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ 27 ಜನ ಲೋಕಸಭಾ ಸದಸ್ಯರು ರಾಜ್ಯಕ್ಕೆ ನೀಡಿದ್ದು ಚೊಂಬು. ಇಷ್ಟೆಲ್ಲಾ ಚೊಂಬುಗಳನ್ನು ನೀಡಿರುವ ಬಿಜೆಪಿ ಪಕ್ಷಕ್ಕೆ ಈ ಮುಂಬರುವ ಲೋಕಸಭಾ ಚುನಾವಣೆಯಲ್ಲಿ 6.5ಕೋಟಿ ಕನ್ನಡಿಗರ ಸಹ ಅದೇ ಚೊಂಬನ್ನು ನೀಡಿ ಮನೆಗೆ ಕಳುಹಿಸಿಲಿದ್ದಾರೆ. ಮೋದಿ ಮತ್ತು ಬಿಜೆಪಿಯವರು ಕರುನಾಡಿನ ಜನತೆಗೆ ಬಿಜೆಪಿ ಸರ್ಕಾರ ಚೊಂಬು ಕೊಟ್ಟಿದ್ದಾರೆ. ಎಲ್ಲರ ಖಾತೆಗೆ 15 ಲಕ್ಷ ರೂಪಾಯಿ ಹಾಕುತ್ತೇವೆ ಎಂದು ಹೇಳಿ ಮೋಸ ಮಾಡಿದ ಬಿಜೆಪಿ ಸರ್ಕಾರ ,ರೈತರ ಆದಾಯ ದ್ವಿಗುಣಗೊಳಿಸಲಿಲ್ಲ, ನಾವು ಕಟ್ಟುವ ಪ್ರತಿ 100 ರೂ. ತೆರಿಗೆಯಲ್ಲಿ 13 ರೂ. ಮಾತ್ರ ವಾಪಸ್ ನೀಡುವ ಮೂಲಕ ಚೊಂಬು ನೀಡಿದೆ. ಬರ ಪರಿಹಾರ ವಿಚಾರದಲ್ಲಿ 18 ಸಾವಿರ ಕೋಟಿ, 15ನೇ ಹಣಕಾಸು ಆಯೋಗದಿಂದ ನೀಡಬೇಕಿದ 62 ಸಾವಿರ ಕೋಟಿ ರೂ. ಚೊಂಬು ಕೊಟ್ಟಿದ್ದಾರೆ ಎಂದು ಕಿಡಿಕಾರಿದ್ದಾರೆ.

Previous articleಪಂಡಿತ ಹಿರೇಮಠ ಶಿವೈಕ್ಯ
Next articleಕಾನೂನಿನಲ್ಲಿ ಅವಕಾಶವಿದ್ದರೆ ಗಲ್ಲಿಗೇರಿಸಲಿ