ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ: ಸಿಎಂ ಬೊಮ್ಮಾಯಿ

0
7
BASAVARAJ BOMAI

ನವದೆಹಲಿ: ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ ಎಂದು ಲೆಕ್ಕ ಹಾಕಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು. ಸೈಲೆಂಟ್ ಸುನೀಲ್ ಜೊತೆಗೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡ‌ ವಿಚಾರದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಅವರು ಇಂದು ಪ್ರತಿಕ್ರಿಯೆ ನೀಡಿದರು.
ಕೇಂದ್ರ ಸಚಿವರ ಭೇಟಿ
ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಸಮಯ ಕೇಳಿದ್ದು, ನಾಳೆ ಸಮಯ ದೊರೆಯುವ ವಿಶ್ವಾಸವಿದೆ ಎಂದರು. ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ , ಭೂಪೇಂದ್ರ ಯಾದವ್ ಮತ್ತು ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದು, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆಗೆ ಮೇಕೆದಾಟು, ಭದ್ರಾ ಮೇಲ್ಡಂಡೆ ಯೋಜನೆ, ಮಹದಾಯಿ ಬಗ್ಗೆ ಚರ್ಚೆ ಮಾಡಲಿರುವುದಾಗಿ ತಿಳಿಸಿದರು. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಉದ್ಘಾಟನೆಗೆ ಆಹ್ವಾನಿಸಲಾಗುವುದು ಹಾಗೂ ಭೂಪೇಂದ್ರ ಯಾದವ್ ಅವರೊಂದಿಗೆ ಪರಿಸರ ಸಂಬಂಧಿ ಯೋಜನೆಗಳ ಬಗ್ಗೆ ಚರ್ಚೆ ಮಾಡಲಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

Previous articleಗಡಿ ವಿವಾದ: ಸುಪ್ರೀಂ ಕೋರ್ಟ್ ನಲ್ಲಿ ನಾಳೆ ವಿಚಾರಣೆ
Next articleಗಾಳಿಯಲ್ಲಿ ಗುಂಡು ಹಾರಿಸಿ ಧಮ್ಕಿ