ಕಾಂಗ್ರೆಸ್ ಪ್ರತಿಭಟನೆಯಲ್ಲಿ ಕುರ್ಚಿಗಾಗಿ ಮಾತಿನ ಸಮರ

0
42

ರಾಯಚೂರು: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಸೋಮವಾರ ನಗರದ ಅಂಬೇಡ್ಕರ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಆರ್‌ಡಿಎ ಮಾಜಿ ಅಧ್ಯಕ್ಷ ಜಿಂದಪ್ಪ ಅವರು ಕುಳಿತುಕೊಳ್ಳಲು ಕುರ್ಚಿ ದೊರಕಲಿಲ್ಲ ಎಂಬ ಕಾರಣಕ್ಕಾಗಿ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷ ಬಸವರಾಜ ಪಾಟೀಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದಾಗ ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ ಅವರು ಮಧ್ಯೆ ಪ್ರವೇಶಿಸಿ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಾತಿನಚಕಮಕಿ ಪ್ರಸಂಗ ಜರುಗಿತು.

ಇದರಿಂದ ಕೆಲ ಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತು. ಆಗ ಮಧ್ಯೆ ಪ್ರವೇಶಿಸಿದ ನಗರಸಭೆ ಮಾಜಿ ಸದಸ್ಯ ಎಂ.ಕೆ ಬಾಬರ್ ಮಧ್ಯ ಪ್ರವೇಶಿಸಿ ಜಿಂದಪ್ಪರನ್ನು ತರಾಟೆಗೆ ತೆಗೆದುಕೊಂಡಾಗ ಪರಿಸ್ಥಿತಿ ಬಿಗಡಾಯಿಸುತ್ತಿರುವುದು ಕಂಡುಬಂದಿತು. ಅಷ್ಟರಲ್ಲಿಯೇ ಪೊಲೀಸರು ಮಧ್ಯೆ ಪ್ರವೇಶಿಸಿ ಪಕ್ಷದ ನಾಯಕರು ಇಬ್ಬರನ್ನು ಸಮಾಧಾನಪಡಿಸಿ ತಿಳಿಗೊಳಿಸಿದರು. ಸಚಿವರಾದ ಡಾ.ಶರಣಪ್ರಕಾಶ ಪಾಟೀಲ್, ಎನ್.ಎಸ್ ಬೋಸರಾಜು ಹಾಗೂ ಜಿಲ್ಲೆಯ ಶಾಸಕರ ಸಮ್ಮುಖದಲ್ಲಿಯೇ ಘಟನೆ ನಡೆಯಿತು

Previous articleಭ್ರಷ್ಟಾಚಾರ ಪ್ರಕರಣ: ನೈತಿಕತೆ ಇದ್ದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ
Next articleಖೋಟಾ ನೋಟು ಮುದ್ರಿಸಿ ಚಲಾವಣೆ: ನಾಲ್ವರ ಸೆರೆ