Home Advertisement
Home ತಾಜಾ ಸುದ್ದಿ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಗಳ ಉಚ್ಛಾಟನೆ

ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಗಳ ಉಚ್ಛಾಟನೆ

0
134
ಕಾಂಗ್ರೆಸ್‌

ಬಂಡಾಯವೆದ್ದಿದ್ದ 24 ಅಭ್ಯರ್ಥಿಗಳಿಗೆ ಕಾಂಗ್ರೆಸ್‌ ಶಾಕ್‌ ನೀಡಿದೆ. ಟಿಕೆಟ್‌ ಕೈ ತಪ್ಪಿರುವುದರಿಂದ ಪಕ್ಷದ ಅಭ್ಯರ್ಥಿಗಳ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಿರುವ 24 ಜನರ ಪ್ರಾಥಮಿಕ ಸದಸ್ಯತ್ವ ರದ್ದುಗೊಳಿಸಿ, ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿ ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಆದೇಶ ಹೊರಡಿಸಿದೆ.
ಅಲ್ಲದೇ ಬಂಡಾಯ ಅಭ್ಯರ್ಥಿಗಳ ಜತೆಗೆ ಪ್ರಚಾರದಲ್ಲಿ ಭಾಗವಹಿಸಿದರೆ ಅಂಥವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವುದಾಗಿ ಸಮಿತಿ ಎಚ್ಚರಿಕೆ ನೀಡಿದೆ.