ಬೆಂಗಳೂರು: ಅಕ್ರಮ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರ ಶಾಸಕ ಸತೀಶ್ ಸೈಲ್ ಒಳಸಂಚು ಪ್ರಕರಣದಲ್ಲಿ ಐದು ವರ್ಷ ಜೈಲು ಶಿಕ್ಷೆ, ವಂಚನೆ ಪ್ರಕರಣದಲ್ಲಿ ಏಳು ವರ್ಷ ಶಿಕ್ಷೆ ಪ್ರಕಟವಾಗಿದೆ. ಅಲ್ಲದೆ ಕಳ್ಳತನ ಪ್ರಕರಣದಲ್ಲಿ ಮೂರು ವರ್ಷ ಜೈಲುಶಿಕ್ಷೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶಿಸಿದೆ. ಅಲ್ಲದೆ ಒಟ್ಟು 9 ಕೋಟಿ 60 ಲಕ್ಷ ರೂ ದಂಡ ವಿಧಿಸಿದೆ.