ಕಾಂಗ್ರೆಸ್‌ ಸರಕಾರದಿಂದ ಕನ್ನಡಿಗರ ಬದುಕಿಗೆ ಗ್ಯಾರಂಟಿ ಇಲ್ಲ

0
11
ಬಿಎಸ್‌ವೈ

ಬೆಂಗಳೂರು: ಕನ್ನಡಿಗರ ಬದುಕಿಗೆ ಗ್ಯಾರಂಟಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.​​ ಯಡಿಯೂರಪ್ಪ ರಾಜ್ಯ ಕಾಂಗ್ರೆಸ್‌ ಸರಕಾರದ ವಿರುದ್ಧ ಹರಿಹಾಯ್ದರು.
ಬೆಂಗಳೂರಿನ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೊಲೆ, ಹಲ್ಲೆ, ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಹುಬ್ಬಳ್ಳಿಯಲ್ಲಿ ಹಾಡಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ನಡೆದಿದೆ. ಸಿದ್ದರಾಮಯ್ಯ ಅವರು ತಮ್ಮದೇ ಪಕ್ಷದ ಕಾರ್ಯಕರ್ತನಿಗೆ ನ್ಯಾಯ ಕೊಡಿಸಿಲ್ಲ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ಕಾರ್ಯಕರ್ತರಿಗೆ ಕಾರು ಹಾಯಿಸಿದ್ದಾರೆ. ಹರ್ಷಿಕಾ ಪೂಣಚ್ಚ ಮೇಲೆ ಹಲ್ಲೆ ಮಾಡಿದ್ದಾರೆ. ವಂಟಮೂರಿಯಲ್ಲಿ ಮಹಿಳೆಯನ್ನು ಬೆತ್ತಲೆ ಮಾಡಿ ಅಮಾನುಷವಾಗಿ ನಡೆದುಕೊಂಡರೂ ಕ್ರಮವಾಗಿಲ್ಲ. ಮಂಡ್ಯದಲ್ಲಿ ಪೊಲೀಸ್​ ಅಧಿಕಾರಿಗಳ ಮೂಲಕ ಹನುಮ ಧ್ವಜ ಇಳಿಸಿದ್ದಾರೆ. ಇದೊಂದು ಕ್ರೂರ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

Previous article`ಲವ್ ಜಿಹಾದ್’ಗೆ ದೇಶದಲ್ಲಿ ತರಬೇತಿ ಕೇಂದ್ರ
Next articleವಿವಾದಾತ್ಮಕ ವಿಷಯಗಳಿಗೆ ಬಿಜೆಪಿ ಆದ್ಯತೆ