Home ತಾಜಾ ಸುದ್ದಿ ಕಾಂಗ್ರೆಸ್ ಸರ್ಕಾರದಲ್ಲಿ ಗಣೇಶ ಭಕ್ತರೇ ಟಾರ್ಗೆಟ್

ಕಾಂಗ್ರೆಸ್ ಸರ್ಕಾರದಲ್ಲಿ ಗಣೇಶ ಭಕ್ತರೇ ಟಾರ್ಗೆಟ್

0

ಬೆಳಗಾವಿ: ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಗಣೇಶ ಭಕ್ತರೇ ಎಒನ್ ಆರೋಪಿಗಳಾಗುತ್ತಿದ್ದಾರೆ. ನಾಗಮಂಗಲದಲ್ಲಿ ಗಲಭೆ ಸೃಷ್ಟಿಸಿದವರು ಕೆಲ ಅಲ್ಪಸಂಖ್ಯಾತರು. ಆದರೆ ಕಾಂಗ್ರೆಸ್ ಸರ್ಕಾರ ಗಣೇಶ ಮಂಡಳದವರನ್ನೇ ಪ್ರಥಮ ಆರೋಪಿಗಳನ್ನಾಗಿ ಮಾಡುತ್ತಿದೆ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣೇಶ ವಿಸರ್ಜಣೆ ಸಂದರ್ಭದಲ್ಲಿ ನಡೆದಿರುವ ಗಲಭೆ ಪ್ರಕರಣ ಸಣ್ಣಪುಟ್ಟ ವಿಚಾರ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ಹಾಸ್ಯಾಸ್ಪದ. ಅಲ್ಪಸಂಖ್ಯಾತರ ತುಷ್ಟೀಕರಣದ ನೀತಿಯಿಂದಲೇ ಇಂತಹ ಗಲಭೆಗಳಾಗುತ್ತಿವೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ ಕೋಮುಗಲಭೆಗಳು ನಡೆಯುತ್ತಿವೆ. ಗಲಭೆಗೆ ಯಾರು ಪ್ರಚೋದನೆ ಕೊಡುತ್ತಾರೋ, ಯಾರು ಕಲ್ಲು ತೂರಾಟ ನಡೆಸಿ ಹಾನಿ ಮಾಡಿದ್ದಾರೋ ಅಂತಹವರನ್ನೇ ರಕ್ಷಣೆ ಮಾಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ದೂರಿದರು.

Exit mobile version