ಕಾಂಗ್ರೆಸ್‌ ಸರ್ಕಾರ ಬೀಳಿಸಲು ವಿದೇಶದಲ್ಲಿ ಷಡ್ಯಂತ್ರ

0
12

ಬೆಂಗಳೂರು: ವಿದೇಶದಲ್ಲಿ ಕುಳಿತು ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಲು ರಾಜಧಾನಿ ಬೆಂಗಳೂರನ್ನು ಬಿಟ್ಟು ಸಿಂಗಾಪುರದಲ್ಲಿ ತಂತ್ರ ಹಣೆಯಲಾಗುತ್ತಿದೆ ಎಂದು ಪರೋಕ್ಷವಾಗಿ ಕುಮಾರಸ್ವಾಮಿ ವಿರುದ್ಧ ಆರೋಪ ಮಾಡಿದ್ದಾರೆ.
ಆ ಬಗ್ಗೆ ನನಗೂ ನಮ್ಮದೇ ಆದ ಮೂಲಗಳಿಂದ ಮಾಹಿತಿ ಇದೆ. ಅವರು ಬೆಂಗಳೂರಲ್ಲಿ ಮಾಡದೇ ಅಲ್ಲಿಗೆ ಹೋಗಿ ಈ ಕೆಲಸ ಮಾಡುವುದು ಅವರ ತಂತ್ರ. ಯಾರು ಏನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ ಎಂದರು.

Previous articleಹಿರಿಯ ಪತ್ರಕರ್ತ ಅನಂತ ವೈದ್ಯ ಇನ್ನಿಲ್ಲ
Next articleಶ್ರೀ ಗಿರಿಸಿದ್ದೇಶ್ವರ ಶಿವಾಚಾರ್ಯರು ಲಿಂಗೈಕ್ಯ