ಕಾಂಗ್ರೆಸ್‌ ಸೇರ್ಪಡೆಯಾದ ಗೀತಾ ಶಿವರಾಜ್‌ಕುಮಾರ್‌

0
15

ಬೆಂಗಳೂರು: ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರ ಸಮ್ಮುಖದಲ್ಲಿ ಗೀತಾ ಶಿವರಾಜ್ ಕುಮಾರ್ ಅವರು ಕಾಂಗ್ರೆಸ್ ಸೇರಿದರು. ಡಿಕೆ ಶಿವಕುಮಾರ್ ಅವರು ಗೀತಾ ಶಿವರಾಜ್ ಕುಮಾರ್ ಅವರಿಗೆ ಕಾಂಗ್ರೆಸ್​ ಚಿಹ್ನೆಯ ಶಾಲು ಹಾಕಿ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡು ನಂತರ ಮಾತನಾಡಿದ ಡಿ ಕೆ ಶಿವಕುಮಾರ ನನ್ನ ನಾಯಕ ಬಂಗಾರಪ್ಪ ಪುತ್ರಿ ಇವರು, ರಾಜ್ ಕುಮಾರ್ ಸೊಸೆ. ಇಡೀ ಕಾಂಗ್ರೆಸ್ ಪಕ್ಷದ ಪರವಾಗಿ ಗೀತಾ ಶಿವರಾಜ್ ಕುಮಾರ್​ಗೆ ಸ್ವಾಗತ ಎಂದರು.

Previous articleಕಾಂಗ್ರೆಸ್ ನೂರು ವರ್ಷದ ಸಂಸ್ಕೃತಿಯನ್ನು ಗಾಳಿಗೆ ತೂರಿದ್ದಾರೆ
Next articleಮೋದಿಗೆ ವಿಷ ಸರ್ಪ ಎಂದವರನ್ನ ಮನೆಗಟ್ಟಿ