ಕಾಂತಾರಾ-2 ಚಿತ್ರೀಕರಣ ನಿಲ್ಲಿಸಿ, ಇಲ್ಲವಾದರೆ ಧರಣಿ ನಡೆಸುತ್ತೇವೆ

0
45

ಗೋಮಾಳ ಜಾಗಕ್ಕೆ ಪರವಾನಗಿ ಪಡೆದು, ಅರಣ್ಯ ಜಾಗದಲ್ಲಿ ಮರಗಳನ್ನು ಕಡಿದು, ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿ

ಹಾಸನ : ನಟ ರಿಷಬ್ ಶೆಟ್ಟಿ ಅಭಿನಯದ ಕಾಂತಾರಾ-2 ಸಿನಿಮಾ ಚಿತ್ರೀಕರಣಕ್ಕಾಗಿ ಅರಣ್ಯ ಪ್ರದೇಶಕ್ಕೆ ಹಾನಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆರೂರು ಗ್ರಾಮದ ಬಳಿ ಘಟನೆ ನಡೆದಿದೆ. ಕೆಲ ದಿನಗಳಿಂದ ಕಾಂತರ-2 ಸಿನಿಮಾ ಚಿತ್ರೀಕರಣಕ್ಕಾಗಿ ಗೋಮಾಳ ಜಾಗಕ್ಕೆ ಪರವಾನಗಿ ಪಡೆದುಕೊಂಡಿತ್ತು ಚಿತ್ರತಂಡ. ಅರಣ್ಯ ಜಾಗದಲ್ಲಿ ಮರಗಳನ್ನು ಕಡಿದು, ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿ ಆರೋಪ ಕೇಳಿ ಬಂದಿದ್ದು, ಸ್ಥಳೀಯರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಕೂಡಲೇ ಚಿತ್ರಿಕರಣ ಸ್ಥಗಿತಗೊಳಿಸಿ ಪರಿಸರ ಉಳಿಸುವ ನಿಟ್ಟಿನಲ್ಲಿ ತಾಲ್ಲೂಕು ಆಡಳಿತ ಮುಂದಾಗಬೇಕು. ಇಲ್ಲವಾದರೆ ಜಿಲ್ಲಾಧಿಕಾಕಾರಿ ಕಚೇರಿ ಎದರು ಪ್ರತಿಭಟನೆ ನಡೆಸುವುದಾಗಿ ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

Previous articleಯೋಜನೆ ಒಂದು ಅಭಿವೃದ್ಧಿಯ ಆಯಾಮ ಹಲವು
Next articleಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ತೋಂಟದ ಸಿದ್ದರಾಮ ಮಹಾಸ್ವಾಮಿಗಳು