Home ನಮ್ಮ ಜಿಲ್ಲೆ ದಕ್ಷಿಣ ಕನ್ನಡ ಕಾಡು ಹಣ್ಣಿನ ರಸ ಕುಡಿದು ಮಹಿಳೆ ಸಾವು

ಕಾಡು ಹಣ್ಣಿನ ರಸ ಕುಡಿದು ಮಹಿಳೆ ಸಾವು

0


ಮಂಗಳೂರು: ಕಾಡಿನಲ್ಲಿ ಸಿಗುವ ಮೈರೋಳ್ ಹಣ್ಣನ್ನು ತಿನ್ನಬಹುದಾದ ಹಣ್ಣು ಎಂದು ಭಾವಿಸಿ ಮನೆಗೆ ತಂದು ಶರಬತ್ತು ಮಾಡಿ ಕುಡಿದ ಮಹಿಳೆಯೊಬ್ಬರು ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ.
ಅಮರಪಡ್ನೂರು ಗ್ರಾಮದ ಕುಳ್ಳಾಜೆ ನಿವಾಸಿ ಲೀಲಾವತಿ(೩೫) ಮೃತಪಟ್ಟವರು. ಇವರ ತಂದೆ ಲೋಕಯ್ಯ ನಾಯ್ಕ ಕೂಡಾ ಹಣ್ಣಿನ ಶರಬತ್ತು ಕುಡಿದು ಅಸ್ವಸ್ಥಗೊಂಡಿದ್ದಾರೆ.
ಲೀಲಾವತಿ ಹಾಗೂ ಲೋಕಯ್ಯ ನಾಯ್ಕ ಒಂದು ವಾರದ ಹಿಂದೆ ಮೈರೋಳ್ ಹಣ್ಣಿನ ರಸ ತೆಗೆದು ಶರಬತ್ತು ಮಾಡಿ ಕುಡಿದಿದ್ದರು. ಪರಿಣಾಮವಾಗಿ ತಂದೆ ಮಗಳಿಬ್ಬರೂ ಅಸ್ವಸ್ಥಗೊಂಡಿದ್ದರು. ಈ ಪೈಕಿ ವಾಂತಿ, ಭೇದಿ ಕಾಣಿಸಿಕೊಂಡಿದ್ದ ಲೀಲಾವತಿಯನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಸ್ವಸ್ಥತೆ ತೀವ್ರಗೊಂಡ ಹಿನ್ನಲೆಯಲ್ಲಿ ಸೋಮವಾರ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಅಸುನೀಗಿದ್ದಾರೆ.
ಮೃತರು ಪತಿ, ಮೂವರು ಮಕ್ಕಳನ್ನು ಅಗಲಿದ್ದಾರೆ.

Exit mobile version