ಕೊಪ್ಪಳ(ಕುಕನೂರು): ತಾಲೂಕಿನ ಬನ್ನಿಕೊಪ್ಪ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದ್ದು, ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.
ಮೃತ ಚಾಲಕನನ್ನು ಅಲ್ಲಾಭಕ್ಷಿ ನದಾಫ್(37) ಎಂದು ಗುರುತಿಸಲಾಗಿದೆ. ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಿಂದ ಕೊಪ್ಪಳಕ್ಕೆ ಬರುತ್ತಿದ್ದಾಗ ಅವಘಡ ಸಂಭವಿಸಿದ್ದು, ಈ ವೇಳೆ ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದರು. ಕಾರು ವೇಗವಾಗಿ ಚಲಾಯಿಸುತ್ತಿದ್ದ ಚಾಲಕನ ನಿಯಂತ್ರಣಕ್ಕೆ ಸಿಗದೇ ಕಾರು ಜೋರಾಗಿ ಡಿವೈಡರಿಗೆ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

























