Home ನಮ್ಮ ಜಿಲ್ಲೆ ಕಾರು, ಗೂಡ್ಸ್ ವಾಹನ ಡಿಕ್ಕಿ: ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವು

ಕಾರು, ಗೂಡ್ಸ್ ವಾಹನ ಡಿಕ್ಕಿ: ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವು

0

ಬಾಗಲಕೋಟೆ: ಜಿಲ್ಲೆಯ ರಕ್ಕಸಗಿ ಗ್ರಾಮದ ಬಳಿ ಕಾರು ಹಾಗೂ ಗೂಡ್ಸ್​ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸೀತಮ್ಮ (60) ಹಾಗೂ ಗಿರೆಮ್ಮ ರಾಟೋಡ್(55) ಮೃತರು ಎಂದು ಗುರಿತಸಲಾಗಿದೆ. ಘಟನೆಯಲ್ಲಿ ಇನ್ನುಳಿದಂತೆ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಮಾರಲದಿನ್ನಿ ತಾಂಡಾ ನಿವಾಸಿಗಳು ಎಂದು ಗುರುತಿಸಲಾಗಿದೆ ಇವರು ಗೂಡ್ಸ್​ ವಾಹನದಲ್ಲಿ ಗುಳೇದಗುಡ್ಡ ದೇವಸ್ಥಾನಕ್ಕೆ ಹೊರಟಿದ್ದರು. ಈ ವೇಳೆ ದುರ್ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಅಮೀನಗಡ ಪೊಲೀಸರು ಭೇಟಿ ನೀಡಿದ್ದಾರೆ.

Exit mobile version