ಕಾರ್ಖಾನೆ ವಿಷಯದಲ್ಲೂ ದ್ವೇಷದ ರಾಜಕಾರಣ

0
18

ಬೆಂಗಳೂರು: ನ್ಯಾಯಾಲಯದ ಆದೇಶವಿದ್ದರೂ ಸಕ್ಕರೆ ಕಾರ್ಖಾನೆ ತೆರೆಯಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಅನುವು ಮಾಡಿಕೊಡದೆ ಉಪಟಳ ನೀಡುತ್ತಿರುವುದನ್ನು ಖಂಡಿಸಿ ಕಾರ್ಖಾನೆಯ ಅಧ್ಯಕ್ಷರು ಹಾಗೂ ಪಕ್ಷದ ಹಿರಿಯ ಶಾಸಕರೂ ಆದ ಬಸನಗೌಡ ಪಾಟೀಲ್​ ಯತ್ನಾಳ್ ಅವರು ಪ್ರಶ್ನಿಸುತ್ತಿರುವ ಕ್ರಮ ನ್ಯಾಯೋಚಿತವಾಗಿದ್ದು ಸರ್ಕಾರ ಈ ಕೂಡಲೇ ಮಧ್ಯಪ್ರವೇಶಿಸಿ ಕಾರ್ಖಾನೆ ಆರಂಭಕ್ಕೆ ತೊಂದರೆ ಉಂಟಾಗದಂತೆ ಕ್ರಮವಹಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಸಾವಿರಾರು ರೈತರು, ನೂರಾರು ಕಾರ್ಮಿಕರ ಬದುಕಿನ ಪ್ರಶ್ನೆಯಾಗಿರುವ ಹಾಗೂ ಉತ್ಪನ್ನ ಕ್ಷೇತ್ರವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಜರೂರು ಕ್ರಮ ಕೈಗೊಳ್ಳದೇ ಹೋದರೆ ಕಾರ್ಖಾನೆಯ ವಿಷಯದಲ್ಲೂ ದ್ವೇಷದ ರಾಜಕಾರಣ ಮಾಡುತ್ತಿದೆ ಎಂಬ ನಿರ್ಧಾರಕ್ಕೆ ಬರಬೇಕಾಗುತ್ತದೆ. ನ್ಯಾಯಾಲಯದ ಆದೇಶ ಪಾಲಿಸದ ಮಾಲಿನ್ಯ ನಿಯಂತ್ರಣ ಮಂಡಳಿಯ ನಡೆಯನ್ನು ಖಂಡಿಸುತ್ತೇನೆ ಎಂದಿದ್ದಾರೆ.

Previous articleಕೃಷ್ಣಾ ತೀರದಲ್ಲಿ ಪ್ರವಾಹ ಭೀತಿ
Next articleವಿಶ್ವ ಹಿಂದೂ ಪರಿಷತ್ ಷಷ್ಠಿಪೂರ್ತಿ ಸಂಭ್ರಮ