ಕಾಲೇಜು ವಿದ್ಯಾರ್ಥಿ ಕೊಲೆ

0
34

ಕಲಬುರಗಿ : ಕೆಲವು ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ಕಾಲೇಜ್ ವಿದ್ಯಾರ್ಥಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಹೊರ ವಲಯದ ನಾಗನಹಳ್ಳಿ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಸುಮಿತ್ ಮಲ್ಲಾಬಾದ್ (೧೯) ಎಂಬ ವಿದ್ಯಾರ್ಥಿ ಕೊಲೆಯಾದವನು.
ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಪೂರ್ಣಗೊಳಿಸಿ ಇತ್ತೀಚೆಗೆ ಪದವಿ ಪ್ರವೇಶ ಪಡೆದುಕೊಂಡಿದ್ದನು.
ಈ ವಿದ್ಯಾರ್ಥಿ ಅದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತ ಸಲುಗೆಯಿಂದ ಇರುತ್ತಿದ್ದನು ಎನ್ನಲಾಗಿದೆ.
ತಾನು ಯುವತಿಯನ್ನು ಪ್ರೀತಿಸುತ್ತಿರುವ ವಿಷಯ ಅಲ್ಲಲ್ಲಿ ಹೇಳಿಕೊಂಡಿದ್ದನು ಎನ್ನಲಾಗಿದೆ. ಶನಿವಾರ ಬೆಳಗ್ಗೆ ಒಬ್ಬಂಟಿಯಾಗಿ ಬರುತ್ತಿದ್ದ ವಿದ್ಯಾರ್ಥಿಯನ್ನು ಕೆಲವು ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಗುಲಬರ್ಗಾ ವಿಶ್ವವಿದ್ಯಾಲಯದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ವರುಣ ಮತ್ತು ಯುವತಿ ಕುಟುಂಬಸ್ಥರು ಸೇರಿ ವಿದ್ಯಾರ್ಥಿಯನ್ನು ಕೊಲೆ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ತಿಳಿಸಿದ್ದಾರೆ.

Previous articleಗೌಡರ ಕೋಟಾದಲ್ಲಿ ಸಿಎಂ ಮಾಡುತ್ತಾರೆ ಅಂತ ಹಗಲು ಕನಸು ಕಾಣುತ್ತಿದ್ದಿರಾ…
Next articleತುಂಗಭದ್ರೆಗೆ ನಾಡದೊರೆ ಸಿದ್ದು ಪ್ರಥಮ ಬಾಗೀನ