Home ನಮ್ಮ ಜಿಲ್ಲೆ ಕಲಬುರಗಿ ಕೀಟನಾಶಕ ಸೇವಿಸಿ ಪ್ರೇಮಿಗಳ ಆತ್ಮಹತ್ಯೆ..!

ಕೀಟನಾಶಕ ಸೇವಿಸಿ ಪ್ರೇಮಿಗಳ ಆತ್ಮಹತ್ಯೆ..!

0

ಕಲಬುರಗಿ: ಚಿತ್ತಾಪುರ ತಾಲೂಕಿನ ನಾಲವಾರ ಹೊಬಳಿ ವ್ಯಾಪ್ತಿಯ ರಾಂಪುರಹಳ್ಳಿ ಗ್ರಾಮದಲ್ಲಿ ಅಪ್ರಾಪ್ತ ಪ್ರೇಮಿಗಳಿಬ್ಬರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಸಂಜೆ ನಡೆದಿದ್ದು, ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ತರ್ಕಸ್ಪೇಟ್ ಗ್ರಾಮ ಸಮೀಪದ ಚೌಕಂಡಿ ತಾಂಡಾದ ಹತ್ತಿರವಿರುವ ಯಲ್ಲಮ್ಮ ದೇವಸ್ಥಾನದ ಹತ್ತಿರ ಅಪ್ರಾಪ್ತ ವಯಸ್ಸಿನ ಪ್ರೇಮಿಗಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾಂಪುರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ರಾಧಿಕಾ ಮೆತ್ತನ್ (ಉಪ್ಪಾರ) (15), ಯಾದಗಿರಿ ನಗರದಲ್ಲಿ ಐಟಿಐ ಓದುತ್ತಿರುವ ಕೊಲ್ಲೂರು ಗ್ರಾಮದ ಆಕಾಶ್ ಭೋವಿ (18), ಮೃತ ದುರ್ದೈವಿಗಳಾಗಿದ್ದಾರೆ. ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ವಿಷಸೇವನೆ ಬಳಿಕ ತನ್ನ ತಾಯಿಗೆ ಕರೆ ಮಾಡಿದ ಆಕಾಶ ತಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿ ಕರೆ ಕಟ್ ಮಾಡಿದ್ದ. ಗಾಬರಿಗೊಂಡ ಪೋಷಕರು ಹುಡುಕಲು ಆರಂಭಿಸಿದ್ದಾರೆ. ಚೌಕಂಡಿ ತಾಂಡಾದ ಯಲ್ಲಮ್ಮ ದೇವಿ ದೇವಸ್ಥಾನ ಹತ್ತಿರ ಇಬ್ಬರು ಬಿದ್ದು ಒದ್ದಾಡುತ್ತಿದ್ದುದ್ದು ಗಮನಕ್ಕೆ ಬಂದಿದೆ. ನಂತರ ಕೊಲ್ಲೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಕಲಬುರ್ಗಿಗೆ ತೆಗೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲಿ ಇಬ್ಬರು ಪ್ರೇಮಿಗಳು ಅಸುನಿಗಿದ್ದಾರೆ. ಪ್ರಕರಣವನ್ನು ಕೈಗೆತ್ತಿಕೊಂಡಿರುವ ಪಿಎಸ್ಐ ತಿರುಮಲೇಶ್ ಕುಂಬಾರ್ ತನಿಖೆ ಕೈಗೊಂಡಿದ್ದಾರೆ.

Exit mobile version