Home Advertisement
Home ಅಪರಾಧ ಕುಕ್ಕರ್ ಬಾಂಬ್ ಸ್ಫೋಟ: ಆರೋಪಿ ಶಾರಿಕ್ ಬೆಂಗಳೂರಿಗೆ

ಕುಕ್ಕರ್ ಬಾಂಬ್ ಸ್ಫೋಟ: ಆರೋಪಿ ಶಾರಿಕ್ ಬೆಂಗಳೂರಿಗೆ

0
79
ಮಂಗಳೂರು

ಮಂಗಳೂರು: ನಗರದ ಪಂಪ್ ವೆಲ್ ಸಮೀಪದ ನಾಗುರಿಯಲ್ಲಿ ತಿಂಗಳ ಹಿಂದೆ ಆಟೋ ರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮುಹಮ್ಮದ್ ಶಾರಿಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ.
ನ.19 ರಂದು ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಆರೋಪಿ ಶಾರಿಕ್ ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ನಗರದ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಪೊಲೀಸ್ ನಿಗಾದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆತನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಈ ನಡುವೆ ಆಸ್ಪತ್ರೆಯ ವೈದ್ಯರ ಶಿಫಾರಸಿನಂತೆ ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಶನಿವಾರ ಬೆಳಗ್ಗೆ 6 ಗಂಟೆಗೆ ಬೆಂಗಳೂರಿಗೆ ಕರೆದೊಯ್ಯಲಾಗಿದೆ’ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

Previous articleನನ್ನ ಸ್ಪರ್ಧೆ ನಿಶ್ಚಿತ: ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ
Next articleರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಿ