ಕುಕ್ಕೆ ದೇವಸ್ಥಾನದ ನೂತನ ಎಇಒ ಯೇಸುರಾಜ್ ಬಗ್ಗೆ ರಾಮಲಿಂಗಾ ರೆಡ್ಡಿ ಸ್ಪಷ್ಟನೆ

0
9

ಬೆಂಗಳೂರು: ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಎಇಓ ಏಸುರಾಜ್ ಅವರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿರುವವರೆಂದು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿ ಪೋಸ್ಟ್‌ ಮಾಡಿರುವ ಅವರು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಎಇಓ ಏಸುರಾಜ್ ಅವರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿರುವವರೆಂದು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ. ಇದು ಬಿಜೆಪಿಯ ಮತ್ತೊಂದು ಸುಳ್ಳು ಹಬ್ಬಿಸುವ ಸೋಶಿಯಲ್ ಮೀಡಿಯಾ ವಾಟ್ಸಾಪ್ ಫೇಕ್ ಯುನಿವರ್ಸಿಟಿ ಆಟವಾಗಿದೆ. ಅವರು ಹಿಂದುಳಿದ ಜಾತಿಗೆ ಸೇರಿದವರಾಗಿದ್ದು, ದಾಖಲೆಗಳು ಇಲ್ಲಿವೆ. ರಾಜ್ಯದಲ್ಲಿ ಇನ್ನೊಂದು ಹಂತದ ಚುನಾವಣೆ ಹತ್ತಿರ ಇರೋದರಿಂದ ಜನರನ್ನು ದಾರಿ ತಪ್ಪಿಸಿ ಅವರ ತಪ್ಪುಗಳನ್ನು ಮುಚ್ಚಿಟ್ಟುಕೊಳ್ಳಲು ಪ್ರಯತ್ನಿಸುತ್ತಿರುವ ಬಿಜೆಪಿಗೆ ಸೋಲಿನ ಭಯ ಶುರುವಾಗಿರುವುದು ಸ್ಪಷ್ಟ ಎಂದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಎಸ್ .ಜೆ ಯೇಸುರಾಜ್ ಎ.30 ರಂದು ಅಧಿಕಾರ ಸ್ವೀಕರಿಸಿದ್ದರು.

Previous articleವಿದ್ಯುತ್ ಕಂಬಕ್ಕೆ ಕ್ರೂಸರ್ ಡಿಕ್ಕಿ : ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ
Next articleಮೋದಿ ಫೋಟೋ ಬಳಕೆಗೆ ಅವಕಾಶ ಸಿಕ್ಕಿದೆ