ಕುತೂಹಲ ಮೂಡಿಸಿದ ಬಂಡೆ ಸಾಹೇಬ್ ಚಿತ್ರದ ಟೀಸರ್

0
42

ಬೆಂಗಳೂರು: ಹುತಾತ್ಮ ಪೊಲೀಸ್ ಅಧಿಕಾರಿ ಮಲ್ಲಿಕಾರ್ಜುನ ಬಂಡೆ ಕುರಿತಾದ ಬಂಡೆ ಸಾಹೇಬ್ ಚಿತ್ರದ ಟೀಸರ್‌ ಬಿಡುಗಡೆಯಾಗಿದೆ.
ಕಳೆದ ಕೆಲವುವರ್ಷಗಳ ಹಿಂದೆ ಗುಲ್ಬರ್ಗದಲ್ಲಿ ರೌಡಿ ಶೀಟರ್ ಮುನ್ನಾ ಅನ್ನು ಸೆರೆಹಿಡಿಯುವ ಸಂದರ್ಭದಲ್ಲಿ ಶೂಟೌಟ್ಗೆ ಬಲಿಯಾದ ಹುತಾತ್ಮ ಪೊಲೀಸ್ ಅಧಿಕಾರಿ(ಪಿ.ಎಸ್.ಐ) ಮಲ್ಲಿಕಾರ್ಜುನ ಬಂಡೆ ಅವರ ಕುರಿತ ನೈಜಘಟನೆ ಆಧಾರಿತ ಈ ಚಿತ್ರಕ್ಕೆ “ಬಂಡೆ ಸಾಹೇಬ್” ಎಂದು ಹೆಸರಿಡಲಾಗಿದ್ದು, ಮಲ್ಲಿಗೆ ಸಿನಿ ಕಂಬೈನ್ಸ್ ಲಾಂಛನದಲ್ಲಿ ಗೋಪಣ್ಣ ದೊಡ್ಮನಿ, ಕಮಲ ದೊಡ್ಮನಿ ಹಾಗೂ ಮಾಲ ವಿ ಕೊರಳ್ಳಿ ಅವರು ನಿರ್ಮಿಸಿರುವ ಈ ಚಿತ್ರವನ್ನು ಚಿನ್ಮಯ್ ರಾಮ್ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಎಂ.ಎಸ್ ತ್ಯಾಗರಾಜ್ ಸಂಗೀತ ನೀಡಿರುವ ನಾಲ್ಕು ಹಾಡುಗಳಿದೆ. ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ ವೀರಣ್ಣ ಕೊರಳ್ಳಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಮುಂಜಾನೆ ಮಂಜು ಛಾಯಾಗ್ರಹಣ ಹಾಗೂ ಚಂದ್ರು ಬಂಡೆ ಅವರ ಸಾಹಸ ನಿರ್ದೇಶನವಿದೆ, ಚಿತ್ರದ ನಾಯಕನಾಗಿ ಸಂತೋಷ್ ರಾಮ್, ನಾಯಕಿಯಾಗಿ ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಕಾವ್ಯ ಭಾರದ್ವಾಜ್ ಹಾಗೂ. ವೀರಣ್ಣ ಕೊರಳ್ಳಿ, ಬಿರಾದಾರ್,‌ ಸಿಂಬಾ ಮುಂತಾದವರು ತಾರಾಬಳಗದಲ್ಲಿದ್ದಾರೆ.

Previous articleರಾಷ್ಟ್ರ ಮಟ್ಟದಲ್ಲಿ  ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿಯಿಂದ ಸನ್ಮಾನ, ಬಹುಮಾನ
Next articleಆರೆಸ್ಸೆಸ್, ಭಾಗವತ್ ಹೆಸರು ಪ್ರಸ್ತಾಪಕ್ಕೆ ಆಕ್ಷೇಪ: ಬಾಬು ಜಗಜೀವನರಾಂ ಜಯಂತ್ಯುತ್ಸವದಲ್ಲಿ ಗದ್ದಲ