ಕುಷ್ಟಗಿ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕುಷ್ಟಗಿ ವಿಧಾನಸಭಾ ಕ್ಷೇತ್ರದಿಂದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದವತಿಯಿಂದ ನಾನು ಸ್ಪರ್ಧೆ ಮಾಡಲಿದ್ದೇನೆ ಈಗಾಗಲೇ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಜನಾರ್ದನ್ ರೆಡ್ಡಿ ಅವರು ನಿರ್ಣಯಿಸಿದ್ದಾರೆ. ಅದರಂತೆ ಕ್ಷೇತ್ರದ ಜನತೆ ಚುನಾವಣೆಯಲ್ಲಿ ಗೆಲ್ಲಿಸುತ್ತಾರೆ ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಆಕಾಂಕ್ಷಿ ಅಭ್ಯರ್ಥಿಯಾಗಿರುವ ಸಿಎಂ ಹಿರೇಮಠ ಹೇಳಿದರು.
ಕುಷ್ಟಗಿಯಲ್ಲಿ ನೂತನವಾಗಿ ಕಲ್ಯಾಣ ರಾಜ್ಯ ಪ್ರಗತಿಪಕ್ಷದ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು, ಗಾಲಿ ಜನಾರ್ದನ್ ರೆಡ್ಡಿ ಅವರು ಸ್ಥಾಪಿಸಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಹೊಸದಾಗಿದ್ದು, ಈ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳಾರಾಗಿದ್ದಾರೆ. ಈ ನಿಟ್ಟಿನಲ್ಲಿ ಮುಂದಿನ 2023ರ ಚುನಾವಣೆಯಲ್ಲಿ ನಾನು ಕುಷ್ಟಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಮತದಾರರು ಮತ್ತು ನನ್ನ ಬೆಂಬಲಿಗರು ಸಹ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸುತ್ತಾರೆ ಎಂಬ ವಿಶ್ವಾಸ ದಟ್ಟವಾಗಿದೆ ಎಂದರು.
ಜೆಡಿಎಸ್ ಪಕ್ಷ ನನಗೆ ದ್ರೋಹ ಮಾಡಿದೆ: ಜೆಡಿಎಸ್ ಪಕ್ಷದಲ್ಲಿ 16 ವರ್ಷಗಳ ಕಾಲ ನಿಷ್ಠಾವಂತ ಕಾರ್ಯಕರ್ತನಾಗಿ ತಾಲೂಕ್ ಅಧ್ಯಕ್ಷನಾಗಿ ರಾಜ್ಯ ಸಂಘಟನೆ ಕಾರ್ಯದರ್ಶಿಯಾಗಿ ಕೆಲಸ ಮಾಡಿರುವ ಅನುಭವ ನನಗಿದೆ.2018 ವಿಧಾನಸಭೆ ಚುನಾವಣೆಯಲ್ಲಿ ನಾನು ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧೆ ಮಾಡಲು ನಿರ್ಣಯ ಮಾಡಿದ್ದೆ.ಆದರೆ ಜೆಡಿಎಸ್ ಪಕ್ಷದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಪಕ್ಷದ ವರಿಷ್ಠ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸ್ಥಳೀಯ ಮಟ್ಟದ ನಾಯಕರ ಅಭಿಪ್ರಾಯ ಮಾಹಿತಿ ಸಂಗ್ರಹ ಪಡೆದುಕೊಳ್ಳದೆ ಮನಸು ಇಚ್ಚೆ ಮಾಜಿ ಎಮ್ ಎಲ್ ಸಿ ಹೆಚ್ ಸಿ ನೀರಾವರಿಗೆ 2018 ಜೆಡಿಎಸ್ ಪಕ್ಷದಿಂದ ಬಿ ಫಾರ್ಮ್ ನೀಡುವ ಫಲವಾಗಿ ಜೆಡಿಎಸ್ ಪಕ್ಷ ಸೋಲನ್ನು ಅನುಭವಿಸಬೇಕಾಯಿತು. ಜೆಡಿಎಸ್ ಪಕ್ಷದ ಮುಖಂಡರ ಏಕ ಪಕ್ಷಿಯ ನಿರ್ಧಾರದಿಂದ ನನಗೆ ಜೆಡಿಎಸ್ ಪಕ್ಷದವರು ಅನ್ಯಾಯ ಮಾಡಿದ್ದಾರೆ ಎಂದರು.
ಸಾವಿರಾರು ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆ: ಪ್ರಮುಖ ಮೂರು ಪಕ್ಷಗಳ ನಿರ್ಣಯ ದಿಂದಾಗಿ ಕ್ಷೇತ್ರದ ಮತದಾರರು ರೋಶವಾಗಿದ್ದಾರೆ.ಹೀಗಾಗಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಕಲ್ಯಾಣ ರಾಜ್ಯ ಪ್ರಗತಿಪಕ್ಷಕ್ಕೆ ದಿನಂಪ್ರತಿ ಸಾವಿರದ ಸಂಖ್ಯೆಯ ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆ ಆಗುತ್ತೇವೆ ಎಂದು ನನಗೆ ದೂರವಾಣಿ ಕರೆ ಮೂಲಕ ಮಾಹಿತಿ ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕನ್ನಡ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಜನಾರ್ದನ ರೆಡ್ಡಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜನೆ ಮೂಲಕ ಪಕ್ಷಕ್ಕೆ ಕಾರ್ಯಕರ್ತರನ್ನು ಸೇರ್ಪಡೆ ಮಾಡಿಕೊಳ್ಳಲಾಗುತ್ತದೆ ಎಂದರು. ಮಹಾಂತೇಶಕಲಭಾವಿ,ಶಶಿಧರ ಕುಂಬಾರ ಸೇರಿದಂತೆ ಅನೇಕರು ಇದ್ದರು.