Home ಕ್ರೀಡೆ ಕುಸ್ತಿಪಟುಗಳ ಬೆಂಬಲಕ್ಕೆ ಪ್ರಿಯಾಂಕಾ ಗಾಂಧಿ

ಕುಸ್ತಿಪಟುಗಳ ಬೆಂಬಲಕ್ಕೆ ಪ್ರಿಯಾಂಕಾ ಗಾಂಧಿ

0

ದೆಹಲಿಯ ಜಂತರ್ ಮಂತರ್‌ನಲ್ಲಿ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಭಾರತೀಯ ಕುಸ್ತಿಪಟುಗಳನ್ನು ಭೇಟಿ ಮಾಡಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಬೆಂಬಲ ವ್ಯಕ್ತಪಡಿಸಿದ್ದಾರೆ. ಹಲಿಯ ಜಂತರ್ ಮಂತರ್‌ನಲ್ಲಿ ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಭಾರತೀಯ ಕುಸ್ತಿಪಟುಗಳನ್ನು ಭೇಟಿ ಮಾಡಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಕುಸ್ತಿಪಟುಗಳು ಪದಕಗಳನ್ನು ಗೆದ್ದಾಗ ನಾವೆಲ್ಲರೂ ಟ್ವೀಟ್ ಮಾಡಿ ಹೆಮ್ಮೆ ಪಡುತ್ತೇವೆ. ಆದರೆ ಇಂದು ಅವರಿಗೆ ನ್ಯಾಯ ಸಿಗದೆ ರಸ್ತೆಯಲ್ಲೇ ಕುಳಿತಿದ್ದಾರೆ. ಈ ಎಲ್ಲಾ ಮಹಿಳಾ ಕುಸ್ತಿಪಟುಗಳು ಈ ಹಂತಕ್ಕೆ ಬರಲು ಸಾಕಷ್ಟು ಕಷ್ಟಪಡುತ್ತಾರೆ. ಸರ್ಕಾರವು ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಉಳಿಸಲು ಏಕೆ ಯತ್ನಿಸುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ” ಎಂದು ಪ್ರಿಯಾಂಕಾ ಗಾಂಧಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Exit mobile version