ಕೆಎಎಸ್ ಪರೀಕ್ಷೆ ಮುಂದೂಡಲು ಎಚ್ಡಿಕೆ ಆಗ್ರಹ

0
48

ನವದೆಹಲಿ: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಈ ತಿಂಗಳ ೨೭ರಂದು ನಡೆಸಲು ಮುಂದಾಗಿರುವ ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಿ ಅಭ್ಯರ್ಥಿಗಳಿಗೆ ಅನುಕೂಲಕರವಾದ ದಿನಾಂಕ ನಿಗದಿಪಡಿಸಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ `ಎಕ್ಸ್’ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಎಚ್ಡಿಕೆ, ವಿಕಲಚೇತನ ಆಕಾಂಕ್ಷಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದಕ್ಕೆ ಹಾಕಿ ಮತ್ತೊಂದು ದಿನಾಂಕ ನಿಗದಿ ಮಾಡಬೇಕು ಎಂದು ಅಭ್ಯರ್ಥಿಗಳು ಮನವಿ ಮಾಡುತ್ತಿದ್ದರೂ ಕೆಪಿಎಸ್‌ಸಿ ಹಟಕ್ಕೆ ಬಿದ್ದಿರುವುದು ಸರಿಯಲ್ಲ ಎಂದಿದ್ದಾರೆ ಕರ್ನಾಟಕ ಲೋಕಸೇವಾ ಆಯೋಗ ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ಎಲ್ಲಿಲ್ಲದ ತರಾತುರಿ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದಿರುವ ಕುಮಾರಸ್ವಾಮಿ, ಪರೀಕ್ಷೆ ಬರೆಯುವವರನ್ನೇ ಚಿತ್ರಹಿಂಸೆಗೆ ಒಳಪಡಿಸಿ ಕೆಪಿಎಸ್ಸಿ ಪರೀಕ್ಷೆ ನಡೆಸುವ ಆತುರದ ಹಿಂದಿರುವ ದುರುದ್ದೇಶವಾದರೂ ಏನು? ಅನೇಕ ಆಕಾಂಕ್ಷಿಗಳಿಗೆ ಪರೀಕ್ಷೆ ಬರೆಯಲಿಕ್ಕೇ ಸಾಧ್ಯವಾಗುತ್ತಿಲ್ಲ. ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ, ಅದರಲ್ಲೂ ಅಂಧ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗುವುದು ಬಹುದೊಡ್ಡ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ.

Previous articleಯಶಸ್ವಿಯಾದ ಆಪರೇಶನ್ ಕಾಳಿ
Next articleರೇಣುಕಾಸ್ವಾಮಿ ಕೊಲೆಗಾರರ ಪಾತ್ರ ಸಾಬೀತು!