ಕೆಐಎಡಿಬಿ ಅಧಿಕಾರಿ ಮನೆ ಮೇಲೆ ಲೋಕಾ ದಾಳಿ

0
38

ಧಾರವಾಡ: ಇಲ್ಲಿಯ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ಮಂಗಳವಾರ ಬೆಳ್ಳಂ ಬೆಳಗ್ಗೆ ಲೋಕಾಯುಕ್ತರು ದಾಳಿ ಮಾಡಿದ್ದಾರೆ.
ಕೆಐಎಡಿಬಿ ಎಇಇ ಗೋವಿಂದಪ್ಪ ಭಜಂತ್ರಿ ಅವರ ಮನೆ ಸೇರಿದಂತೆ ಆರು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಡಿವೈಎಸ್‌ಪಿ ವೆಂಕನಗೌಡ ಪಾಟೀಲ ನೇತೃತ್ವದಲ್ಲಿ ಧಾರವಾಡ ಗಾಂಧಿನಗರದಲ್ಲಿಯ ಮನೆ, ಸವದತ್ತಿ ತಾಲೂಕಿನ ಹೂಲಿ, ಉಗರಗೋಳದಲ್ಲಿಯ ಫಾರ್ಮಹೌಸ್, ತೇಜಸ್ವಿನಗರದ ಅಳಿಯನ ಮನೆ, ಲಕಮನಹಳ್ಳಿಯ ಕೆಐಎಡಿಬಿ ಕಚೇರಿ ಹಾಗೂ ನರಗುಂದದ ಸಹೋದರನ ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲಿಸಲಾಗುತ್ತಿದೆ.

Previous articleಬೆಂಗಳೂರು ವಿವಿ ನಿವೃತ್ತ ಉಪ ಕುಲಪತಿ ಪ್ರೊ.ಎಂ.ಎಸ್.ತಿಮ್ಮಪ್ಪ ನಿಧನ
Next articleಬೆಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್