ದಾವಣಗೆರೆ: ಕೆಲವರು ಸಾವಿರಾರು ಕೋಟಿ ಹಣ ಇಟ್ಟುಕೊಂಡು ಸಿಎಂ ಸ್ಥಾನಕ್ಕಾಗಿ ಕಾಯುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದರಲ್ಲಿ ಕಾಂಗ್ರೆಸ್ನವರೂ ಇದ್ದಾರೆ, ಬೇರೆ ಪಕ್ಷದವರೂ ಇದ್ದಾರೆ. ಸಾವಿರ ಕೋಟಿ ಹಣ ಇಟ್ಟುಕೊಂಡು ಸಿಎಂ ಆಗಲು ಸಿದ್ಧರಿದ್ದಾರೆ ಎಂದಿದ್ದಾರೆ.