Home Advertisement
Home ನಮ್ಮ ಜಿಲ್ಲೆ ಕೊಪ್ಪಳ ಕೆಲಸ ಮಾಡದೇ ಬಿಲ್ ಕೊಡುವುದು ಕಾಂಗ್ರೆಸ್ ಚಾಳಿ :ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕೆಲಸ ಮಾಡದೇ ಬಿಲ್ ಕೊಡುವುದು ಕಾಂಗ್ರೆಸ್ ಚಾಳಿ :ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

0
108
CM

ಕೊಪ್ಪಳ : ಕೆಲಸ ಮಾಡದೇ ಬಿಲ್ ಕೊಡುವುದು ಕಾಂಗ್ರೆಸ್ ಚಾಳಿ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಆನೆಗುಂದಿಯಲ್ಲಿ ಕಾಮಗಾರಿಗೆ 125 ಕೋಟಿ ಮಂಜೂರು ಮಾಡಿದ್ದು ಬಿಡುಗಡೆಯಾಗಿಲ್ಲಯೆಂದು ವಿರೋಧ ಪಕ್ಷದವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕೆಲಸ ಹೇಗೆ ನಡೆಯುತ್ತದೆ ಎಂಬ ಕಲ್ಪನೆ ಇರಬೇಕು. ಅನುಮೋದನೆಯಾಗಿ ಸರ್ಕಾರಿ ಆದೇಶವಾಗಿ ಟೆಂಡರ್ ಆಗಿದೆ. ಅನಂತರ ಬಿಲ್ ಕೊಡುತ್ತಾರೆ ಎಂದರು.
ಪ್ರತಿಕ್ರಿಯೆ ಇಲ್ಲ
ಮಾಜಿ ಸಿಎಂ ಆಪ್ತರ ಆಡಿಯೋ ಬಗ್ಗೆ ಪ್ರತಿಕ್ರಿಯೆ ನೀಡಲಾಗುವುದಿಲ್ಲ. ಹೇಳಿಕೆ ಕೊಟ್ಟವರು ಅದಕ್ಕೆ ಜವಾಬ್ದಾರರು ಎಂದರು.
35 ವರ್ಷಗಳ ಸಂಬಂಧ
ಸಚಿವ ವಿ.ಸೋಮಣ್ಣ ಅವರು ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸ್ನೇಹಿತರು ಎಂದಿರುವ ಬಗ್ಗೆ ಉತ್ತರಿಸಿ ಅವರೊಂದಿಗೆ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ. ಸೋಮಣ್ಣ ನಮ್ಮದು 35 ವರ್ಷಗಳ ಸಂಬಂಧ ಎಂದರು. ಅದು ಸತ್ಯ ಎಂದರು.

Previous articleದಶಪಥ ಹೆದ್ದಾರಿಯಲ್ಲಿ ಟೋಲ್‌ ಸಂಗ್ರಹ ವಿರೋಧಿಸಿ ಪ್ರತಿಭಟನೆ
Next articleಕಾಂಗ್ರೆಸ್‌ನಲ್ಲಿ ನಾಯಕತ್ವವಿಲ್ಲ