ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಏ.17ರಂದು ಬೃಹತ್ ಪ್ರತಿಭಟನೆ

0
24

ಬೆಂಗಳೂರು: ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಏ.17ರಂದು ನಡೆಸಲು ಉದ್ದೇಶಿಸಿರುವ ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಿದ್ಧತೆ ಸಭೆ ನಡೆಸಲಾಯಿತು.
ನಗರದ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿ ರಾಜ್ಯ ಬಿಜೆಪಿ ಮುಖಂಡರು ಜನಾಕ್ರೋಶ ಯಾತ್ರೆ ಹೊರಟ ದಿನವೇ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಗೆ ತಲಾ 2 ರೂ. ಹಾಗೂ ಗ್ಯಾಸ್ ಸಿಲಿಂಡರ್ ಬೆಲೆಯನ್ನು 50 ರೂ. ಹೆಚ್ಚಳ ಮಾಡಿ ಇವರ ಯಾತ್ರೆಗೆ ‘ಗಿಫ್ಟ್’ ಕಳಿಸಿದ್ದಾರೆ. ಇದರ ಬಗ್ಗೆ ಜನಸಾಮಾನ್ಯರು ಮಾಡುತ್ತಿರುವ ಗುಣಗಾನವನ್ನು ಎಲ್ಲರೂ ಕೇಳಬೇಕು. ಕೇಂದ್ರ ಸರ್ಕಾರದ ವಿರುದ್ಧ ಮಾಡುತ್ತಿರುವ ಜನಾಕ್ರೋಶ ಯಾತ್ರೆ ಎಂದು ಬಿಜೆಪಿಯವರು ಬೋರ್ಡ್ ಹಾಕಿಕೊಳ್ಳಬೇಕು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಹೋರಾಟದ ಸ್ವರೂಪವನ್ನು ಶೀಘ್ರ ತಿಳಿಸಲಾಗುತ್ತದೆ ಎಂದರು.

Previous articleಅವಳಿನಗರಕ್ಕೆ ಮೆಟ್ರೋ ಮಾದರಿಯ ವಿದ್ಯುತ್‌ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ
Next articleಪ್ರೇಯಸಿಯನ್ನು ಸೂಟ್‌ಕೇಸ್‌ ಒಳಗೆ ಕೂರಿಸಿ ಬಾಯ್ಸ್ ಹಾಸ್ಟೆಲ್‌ಗೆ ಕರೆತಂದ ವಿದ್ಯಾರ್ಥಿ