ಕೊಪ್ಪಳ:ವಿದ್ಯುತ್ ಬೆಲೆ ಏರಿಕೆ ಎಲ್ಲೇಡೆ ಸುದ್ದಿಯಾಗುತ್ತಿದೆ. ಇದರ ನಡುವೆ ಕೊಪ್ಪಳದಲ್ಲಿ ವೃದ್ಧೆಯ ಮನೆಗೆ ಬರೋಬ್ಬರಿ ೧ ಲಕ್ಷ ರೂಪಾಯಿ ವಿದ್ಯುತ್ ಬಿಲ್ ಬಂದಿದ್ದು, ವೃದ್ಧೆ ಶಾಕ್ ಆಗಿದ್ದಾಳೆ.
ಹೌದು.. ಕೊಪ್ಪಳದಲ್ಲಿ ಗಿರಿಜಮ್ಮ ವೃದ್ಧೆ ೧ ಲಕ್ಷ ಕರೆಂಟ್ ಬಿಲ್ ಬಂದಿದೆ. ವೃದ್ಧೆ ಗಿರಿಜಮ್ಮ ನಿವಾಸಕ್ಕೆ ಜೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ರಾಜೇಶ್ ಭೇಟಿ ನೀಡಿದ್ದಾರೆ. 2021ರಿಂದ ಮೀಟರ್ ರೀಡಿಂಗ್ ತೊಂದರೆಯಿಂದ ಬಿಲ್ ಬಂದಿದೆ. ನಮ್ಮ ಸಿಬ್ಬಂದಿ ಹಾಗೂ ಬಿಲ್ ಕಲೆಕ್ಟರ್ ತಪ್ಪಿನಿಂದಾಗಿ ಹೀಗಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗುತ್ತೆ. ಇಂತಹ ಯಾವುದೇ ಪ್ರಕರಣಗಳಿದ್ದರೂ ನಮ್ಮ ಗಮನಕ್ಕೆ ತನ್ನಿ ಎಂದು ಕೊಪ್ಪಳ ಜೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ರಾಜೇಶ್ ಸ್ಪಷ್ಟನೆ ನೀಡಿದ್ದಾರೆ. ಇನ್ನು ಕರೆಂಟ್ ಬಿಲ್ ಕಟ್ಟಬೇಕಿಲ್ಲ ಎಂದಿದ್ದಕ್ಕೆ ವೃದ್ಧೆ ಗಿರಿಜಮ್ಮ ಜೆಸ್ಕಾಂ ಅಧಿಕಾರಿಗಳಿಗೆ ಧನ್ಯವಾದ ಹೇಳಿದರು.