ಬೆಂಗಳೂರು: ಕೋರ್ಟ್ ಆವರಣದಲ್ಲಿ ವಕೀಲೆಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ.
ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣದಲ್ಲಿ ವಿಮಲ ಎಂಬುವವರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಪ್ರಾಪರ್ಟಿ ವಿಚಾರವಾಗಿ ಇಬ್ಬರು ಕಿರಿಕ್ ಮಾಡಿಕೊಂಡಿದ್ದರು ಎನ್ನಲಾಗಿದೆ.ವಿಮಲಾ ಪರಿಸ್ಥಿತಿ ಗಂಭೀರವಾಗಿದ್ದು ಅವರನ್ನು ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಕರಣ ಕುರಿತಂತೆ ಹಲಸೂರುಗೇಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.