ಕೋವಿಡ್‌ನಲ್ಲಿ ಮೃತಪಟ್ಟ ಕುಟುಂಬಸ್ಥರ ಶಾಪ ಬಿಜೆಪಿಗೆ ತಟ್ಟುತ್ತೆ

0
42

ಹುಬ್ಬಳ್ಳಿ: ಕೋವಿಡ್‌ನಲ್ಲಿ ಭಾರಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ೨೦೦೦ ರೂ. ಇಂಜೆಕ್ಷನ್‌ನ್ನು ೩೦ ಸಾವಿರಕ್ಕೆ ಕಾಳಸಂತೆಯಲ್ಲಿ ಮಾರಾಟವಾಗಿದೆ. ಆ ಸಂದರ್ಭದಲ್ಲಿ ಬಿಜೆಪಿ ದುರಾಡಳಿತದಿಂದ ಸಾವಿರಾರು ಜನ ಮೃತಪಟ್ಟಿದ್ದಾರೆ. ಕೋವಿಡ್‌ನಲ್ಲಿ ಮೃತಪಟ್ಟ ಕುಟುಂಬಸ್ಥರ ಶಾಪ ಬಿಜೆಪಿಗೆ ತಟ್ಟುತ್ತೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ವಾಧಿಕಾರ ನಡೆಸುತ್ತಿಲ್ಲ. ಬದಲಿಗೆ ಕೇಂದ್ರದ ಬಿಜೆಪಿ ಸರ್ಕಾರ ಸರ್ವಾಧಿಕಾರತ್ವ ತೋರುತ್ತಿದೆ. ಸಿಬಿಐ, ಐಟಿ, ಚುನಾವಣೆ ಆಯೋಗ ಎಲ್ಲ ಸಂಸ್ಥೆಗಳನ್ನು ಬಿಜೆಪಿ ದುರುಪಯೋಗ ಮಾಡಿಕೊಂಡಿದೆ. ಈಗ ನ್ಯಾಯಾಂಗದಲ್ಲೂ ಹಸ್ತಕ್ಷೇಪ ಮಾಡಲು ಬಿಜೆಪಿ ನಾಯಕರು ಹೊರಟಿದ್ದಾರೆ. ಬಿಜೆಪಿಯ ಹಿಟ್ಲರ್ ಶಾಹಿ ಆಡಳಿತ ಮುಂದೆ ನಡೆಯುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ಬಿಜೆಪಿ ವಿರುದ್ಧ ಮಾತನಾಡಿದವರನ್ನು ಜೈಲಿಗೆ ಹಾಕಿದ್ದನ್ನು ನಾವು ನೋಡಿದ್ದೇವೆ. ಆದರೆ, ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಈ ರೀತಿ ಮಾಡಿಲ್ಲ. ನಾವು ಅದೇ ರೀತಿ ಮಾಡಿದ್ದರೆ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಯುತ್ತಿರಲಿಲ್ಲ ಎಂದು ಹೇಳಿದರು.

Previous article`ಹಗರಣ ಮಾಡುವದೇ ಕಾಂಗ್ರೆಸ್ಸಿನ ಹುಟ್ಟು ಗುಣ’
Next articleಮೈಕೆಲ್ ಡಿ ಕುನ್ಹಾ ನೀವು ನ್ಯಾಯಾಧೀಶರು, ಏಜೆಂಟರಲ್ಲಾ