Home Advertisement
Home ತಾಜಾ ಸುದ್ದಿ ಕ್ರಿಶ್ಚಿಯನ್ ಸಮುದಾಯದ ಶಿಕ್ಷಕರಿಗೆ ಗುಡ್ ಫ್ರೈಡೇ ದಿನಗಳಲ್ಲಿ SSLC ಮೌಲ್ಯ ಮಾಪನ ಕರ್ತವ್ಯಕ್ಕೆ ವಿನಾಯಿತಿ

ಕ್ರಿಶ್ಚಿಯನ್ ಸಮುದಾಯದ ಶಿಕ್ಷಕರಿಗೆ ಗುಡ್ ಫ್ರೈಡೇ ದಿನಗಳಲ್ಲಿ SSLC ಮೌಲ್ಯ ಮಾಪನ ಕರ್ತವ್ಯಕ್ಕೆ ವಿನಾಯಿತಿ

0
123

ಮಂಗಳೂರು: ಪವಿತ್ರ ಈಸ್ಟರ್,ಗುಡ್ ಫ್ರೈಡೇ ದಿನಗಳಲ್ಲಿ ಕ್ರಿಶ್ಚಿಯನ್ ಸಮುದಾಯದ ಶಿಕ್ಷಕ/ಶಿಕ್ಷಕಿಯರು ಎಸ್ ಎಸ್ ಎಲ್ ಸಿ ಮೌಲ್ಯ ಮಾಪನದ ಕರ್ತವ್ಯಕ್ಕೆ ಹಾಜರಾಗಬೇಕಾಗಿತ್ತು.ಈ ಬಗ್ಗೆ ಯು ಟಿ ಖಾದರ್ ರವರ ಬಳಿ ಕ್ರಿಶ್ಚಿಯನ್ ಸಮುದಾಯದ ಶಿಕ್ಷಕ ಶಿಕ್ಷಕಿಯರು ಸರಕಾರದ ಜೊತೆ ಮಾತುಕತೆ ನಡೆಸಿ ವಿನಾಯಿತಿ ದೊರಕಿಸಿಕೊಡುವಂತೆ ಮನವಿ ಮಾಡಿದ್ದರು.

ಈ ಬಗ್ಗೆ ಶಿಕ್ಷಣ ಇಲಾಖೆಯ ಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗಳ ಜೊತೆ ಮಾತುಕತೆ ನಡೆಸಿದ ಸಭಾಧ್ಯಕ್ಷ ಯು ಟಿ ಖಾದರ್ ಈಸ್ಟರ್ ಗುಡ್ ಫ್ರೈಡೇ ದಿನಗಳಾದ ಗುರುವಾರ,ಶುಕ್ರವಾರ ಹಾಗೂ ಭಾನುವಾರ ಕರ್ತವ್ಯಕ್ಕೆ ವಿನಾಯಿತಿ ನೀಡುವಂತೆ ಸೂಚನೆ ನೀಡಿದ್ದರು.

ಅದರಂತೆ ಶಿಕ್ಷಣ ಇಲಾಖೆಯು ಕ್ರಿಶ್ಚಿಯನ್ ಸಮುದಾಯದ ಶಿಕ್ಷಕ/ಶಿಕ್ಷಕಿಯರಿಗೆ ಈಸ್ಟರ್,ಗುಡ್ ಫ್ರೈಡೇ ದಿನಗಳಲ್ಲಿ ವಿನಾಯಿತಿ ನೀಡಿ ಉಳಿದ ದಿನಗಳಲ್ಲಿ ಹಾಜರಾಗಲು ಅನುಮತಿ ನೀಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿಗಳು ಮಾಹಿತಿ ನೀಡಿದ್ದಾರೆ.

Previous articleಜಾತಿಗಣತಿ ರಾಜ್ಯ ಸರ್ಕಾರಕ್ಕೆ ಬಿಟ್ಟಿದ್ದು
Next articleಜನರ ಆಕ್ರೋಶ ಪ್ರಗತಿಪರ ಕಾಂಗ್ರೆಸ್ ಮೇಲೆ ಅಲ್ಲ…