ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಕಾರು

0
21

ಶಿಗ್ಗಾವಿ: ಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಅಂಕಲಕೋಟಿ ಕಾಲೇಜು ಹತ್ತಿರದ ಸರ್ವಿಸ್ ರಸ್ತೆಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಕಾರೊಂದು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಘಟನೆಗೆ ಕಾರಣ ತಿಳಿದು ಬರಬೇಕಿದ್ದು, ಸ್ಥಳಕ್ಕೆ ಶಿಗ್ಗಾವಿ ಅಗ್ನಿಶಾಮಕ ದಳದ ಅಧಿಕಾರಿಗಳು ಬಂದು ಬೆಂಕಿ ನಂದಿಸಿದ್ದಾರೆ.
ರಾಮದುರ್ಗ ತಾಲೂಕಿನ ತೋರಣಗಲ್ ಗ್ರಾಮದ ರೆಹಮಾನಸಾಬ್ ನಿಪ್ಪಾಣಿ ಎಂಬುವವರಿಗೆ ಸೇರಿದ ಕಾರು ಇದಾಗಿದೆ ಎಂದು ತಿಳಿದು ಬಂದಿದ್ದು, ಸ್ಥಳಕ್ಕೆ ಶಿಗ್ಗಾವಿ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

Previous articleಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು
Next articleಬೆಂಕಿ ಅವಘಡ : ಮತದಾನದಿಂದ ಉಳಿದ ಜೀವಗಳು