ಖಾಸಗಿ ಆಸ್ಪತ್ರೆಗಳ ಹೊರಗೆ ದರಪಟ್ಟಿ ಕಡ್ಡಾಯ

0
16

ಬೆಂಗಳೂರು: ಖಾಸಗಿ ಆಸ್ಪತ್ರೆಗಳ ಹೊರಭಾಗದಲ್ಲಿ ದರಪಟ್ಟಿ ಪ್ರಕಟಿಸುವುದು ಇನ್ನು ಕಡ್ಡಾಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಸುಲಿಗೆ ಮಾಡಲಾಗುತ್ತಿದೆ ಎನ್ನುವ ಕುರಿತು ಅನೇಕ ದೂರುಗಳು ಬಂದಿವೆ. ಹೀಗಾಗಿ ಸುಲಿಗೆ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಆರೋಗ್ಯ ಇಲಾಖೆ, ಕೆಪಿಎಂಇ ಮುಖಾಂತರ ಅಂಗೀಕೃತವಾದ ಆಸ್ಪತ್ರೆಗಳು ಆವರಣದಲ್ಲಿ ಹಾಗೂ ಹೊರ ಭಾಗದಲ್ಲಿ ಚಿಕಿತ್ಸಾ ದರ ಪಟ್ಟಿಯನ್ನು ಅಳವಡಿಸಬೇಕು. ಯಾವ್ಯಾವ ಚಿಕಿತ್ಸೆಗಳಿಗೆ ಎಷ್ಟು ದರ ಎಂಬ ಪಟ್ಟಿಯನ್ನು ಅಳವಡಿಸಬೇಕು ಎಂದು ಸೂಚಿಸಿದೆ ಎಂದರು.
ಒಂದು ವೇಳೆ ದರಪಟ್ಟಿ ಪ್ರಕಟಿಸದಿದ್ದರೆ ಆಸ್ಪತ್ರೆಗಳ ಪರವಾನಗಿ ರದ್ದುಗೊಳಿಸುವ ಬಗ್ಗೆ ಆಲೋಚಿಸಲಾಗುವುದು. ಆದೇಶ ಪಾಲನೆ ಮಾಡದ ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ನೀಡಿ ಸೀಜ್ ಮಾಡುವ ಬಗ್ಗೆಯೂ ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ.

Previous articleಉತ್ತಮ ಪೌಷ್ಠಿಕಾಂಶ ಉತ್ತಮ ಶಿಕ್ಷಣಕ್ಕೆ ರಹದಾರಿ
Next articleಮಾಜಿ ರಾಜ್ಯಪಾಲರ ಮನೆ, ಕಚೇರಿ ಮೇಲೆ ಸಿಬಿಐ ದಾಳಿ