Home ಅಪರಾಧ ಖಾಸಗಿ ಬಸ್ ಮಗುಚಿ 12 ಜನರಿಗೆ ಗಾಯ

ಖಾಸಗಿ ಬಸ್ ಮಗುಚಿ 12 ಜನರಿಗೆ ಗಾಯ

0

ಹುಬ್ಬಳ್ಳಿ: ತಾಲ್ಲೂಕಿನ ಪಾಳ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ ಬದಿ ಖಾಸಗಿ ಬಸ್ ಮಗುಚಿ 12 ಜನ‌ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಬೆಂಗಳೂರಿನಿಂದ ಬೆಳಗಾವಿಗೆ ಹೋಗುತ್ತಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲವರ ತಲೆಗೆ ಗಂಭೀರ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಯಾಣಿಕರ ವಿವರ ತಿಳಿದು ಬಂದಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Exit mobile version