ಖಾಸಗಿ ಸಂಸ್ಥೆ ನೀಡುವ FSL ವರದಿಗೆ ಸರ್ಕಾರ ಮಾನ್ಯತೆ ಕೊಡುವುದಿಲ್ಲ

0
30

ಶಿರಸಿ: ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ಅವರು ಖಾಸಗಿ ಸಂಸ್ಥೆ ನೀಡುವ FSL ವರದಿಯನ್ನು ಸರ್ಕಾರ ಒಪ್ಪುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದರು.
ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಅಧ್ಯತೆಯಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 854 ಕೋಟಿ ರೂ ಪಿಡಿ ಖಾತೆಯಲ್ಲಿದೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಉಚಿತ ಸಹಾಯವಾಣಿ ಆರಂಭಿಸಲಾಗುವುದು. ಸಚಿವರು ಮತ್ತು ಶಾಸಕರ ಅಧ್ಯಕ್ಷತೆ ಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆಗಳನ್ನು ನಡೆಸುವಂತೆ ಸೂಚನೆ ನೀಡಲಾಗಿದೆ. ಪ್ರತೀ ವಾರಕ್ಕೊಮ್ಮೆ ಪಿಡಿಒ ಗಳು ಮತ್ತು ವಿಎ ಗಳ ಸಭೆ ನಡೆಸುವಂತೆ ಸೂಚನೆ ನೀಡಲಾಗಿದೆ. ಈ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಡಿಸಿ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

Previous articleಐಹೊಳೆ ಗ್ರಾಮದ ಸ್ಮಾರಕಗಳ ಸಂರಕ್ಷಣೆಗೆ ಧರ್ಮಸ್ಥಳ ಮಂಜುನಾಥೇಶ್ವರ ಟ್ರಸ್ಟ್ ಜೊತೆ ಸರ್ಕಾರ ಒಡಂಬಡಿಕೆ
Next articleಕುಂಟ್ ಸತ್ಯಪ್ಪನಿಗೆ ಕಾಲಿಲ್ಲ…