ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

0
22

ಬಂಟ್ವಾಳದಲ್ಲಿ ಫೆ. 5ರಂದು ನಡೆದ ಜನತಾ ದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ಜನತಾದರ್ಶನದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ದೂರುಗಳು ಬಂದಿದ್ದು, ಈ ಬಗ್ಗೆ ಸ್ಪಂದಿಸಲು ಗಣಿ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಯು ಪೂರ್ವಾನುಮತಿ ಪಡೆಯದೆ ಗೈರು ಹಾಜರಾಗಿದ್ದರು.
ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಯ ವಿರುದ್ಧ ಶಿಸ್ತುಕ್ರಮಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಸಚಿವರು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

Previous articleಅದ್ಧೂರಿಯಾಗಿ ನಡೆದ ಹಠಯೋಗಿಯ ಮಹಾರಥೋತ್ಸವ
Next articleಮಹಾರಾಷ್ಟ್ರ ಮತಪಟ್ಟಿ ವಿಚಾರದಲ್ಲಿ ಕಾಂಗ್ರೆಸ್ ಡ್ರಾಮಾ