Home ತಾಜಾ ಸುದ್ದಿ ಗಾಂಧಿ ಕುಟುಂಬವನ್ನು ಟಾರ್ಗೆಟ್ ಮಾಡುತ್ತಿರುವವರು ಯಾರು?: ಆನಂದ್‌ಸಿಂಗ್‌ ಪ್ರಶ್ನೆ

ಗಾಂಧಿ ಕುಟುಂಬವನ್ನು ಟಾರ್ಗೆಟ್ ಮಾಡುತ್ತಿರುವವರು ಯಾರು?: ಆನಂದ್‌ಸಿಂಗ್‌ ಪ್ರಶ್ನೆ

0

ಬಳ್ಳಾರಿ: ಗಾಂಧಿ' ಕುಟುಂಬವನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಹೇಳಿರುವ ಎಐಸಿಸಿ ಮುಖಂಡ ರಾಹುಲ್ ಗಾಂಧಿಯವರು, ಟಾರ್ಗೆಟ್ ಮಾಡುತ್ತಿರುವವರು ಯಾರು? ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಪ್ರವಾಸೋದ್ಯಮ ಸಚಿವ ಆನಂದ್‌ಸಿಂಗ್ ಆಗ್ರಹಿಸಿದರು. ನಗರದಲ್ಲಿ ಹಿಂದುಳಿದ ವರ್ಗ ಮೋರ್ಚಾದ ಪೂರ್ವಭಾವಿ ಸಭೆಯ ಬಳಿಕ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆಭಾರತ್ ಜೋಡೊ’ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ. ಈ ವೇಳೆ ರಾಹುಲ್ ಗಾಂಧಿಯವರು, ಗಾಂಧಿ ಕುಟುಂಬವನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂಬ ಹೇಳಿಕೆ ನೀಡಿದ್ದು, ಟಾರ್ಗೆಟ್ ಮಾಡುತ್ತಿರುವವರು ಮತದಾರರು ಅಥವಾ ಇತರೆ ರಾಜಕೀಯ ಪಕ್ಷಗಳವರಾ..? ಎಂಬುದನ್ನು ಸ್ಪಷ್ಟಪಡಿಸಬೇಕು. ಜನರ ಭಾವನೆಗಳನ್ನು ಕೆರಳಿಸುವ ಈ ರೀತಿಯ ಹೇಳಿಕೆಗಳನ್ನು ನೀಡಿ ಅನುಕಂಪ ಗಿಟ್ಟಿಸಿಕೊಳ್ಳಬಾರದು. ಕಾಂಗ್ರೆಸ್ ಪಕ್ಷದ 70 ವರ್ಷದ ಆಡಳಿತ ಏನೆಂಬುದು ಎಂದು ಜನರಿಗೆ ಗೊತ್ತಿದೆ. ಅದನ್ನು ರಾಹುಲ್ ಗಾಂಧಿಯವರು ಹೇಳುವ ಅಗತ್ಯವಿಲ್ಲ ಎಂದು ಟೀಕಿಸಿದರು.

Exit mobile version