ಗುಂಡಿಗೆ ಬಿದ್ದ ಕ್ಯಾಂಟರ್‌: ಮೂವರು ಯುವಕರ ಸಾವು

0
19

ಗದಗ : ವೇಗವಾಗಿ ಸಾಗುತ್ತಿದ್ದ ಕ್ಯಾಂಟರ್ ಒಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಗುಂಡಿಗೆ ಬಿದ್ದ ಹಿನ್ನೆಲೆಯಲ್ಲಿ ಮೂವರು ಯುವಕರು ಪ್ರಾಣ ಬಿಟ್ಟಿದ್ದು ಇನ್ನೂಳಿದ ಮೂವರಿಗೆ ಗಾಯಗಳಾಗಿವೆ.
ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕ್ಯಾಂಟರ್ ಪಲ್ಟಿಯಾಗಗುತ್ತಿದಂತೆ ಚಾಲಕ ಪರಾರಿಯಾಗಿದ್ದಾನೆ.
ವೀನ್ ಕುಂಬಾರ್ (23), ನಾಗಪ್ಪ ಕಾಳಿ (23), ಗಂಗಪ್ಪ ಅಕ್ಕಿ (22) ಮೃತ ದುರ್ದೈವಿಗಳಾಗಿದ್ದಾರೆ. ಗಾಯಾಗೊಂಡ ಮೂವರಿಗೆ ಗದಗನ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

Previous articleಸರ್ಕಾರ ರೈತರ ಬಗ್ಗೆ ಕಾಳಜಿ ಹೊಂದಿದೆ
Next articleಸಂಸದ ರಮೇಶ ಜಿಗಜಿಣಗಿ ಆಸ್ಪತ್ರೆಯಿಂದ ಬಿಡುಗಡೆ