Home ಅಪರಾಧ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆಗೆ ಶರಣು

ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆಗೆ ಶರಣು

0

(ನಾಪೋಕ್ಲು): ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಡಿಯತ್ತೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಬಾಡನ ಆನಂದ (ಡಾಲಿ-೭೫) ಎಂಬವರೆ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಆನಂದ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಹತ್ತು ದಿನಗಳ ಹಿಂದೆಯಷ್ಟೇ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಮನೆಗೆ ಬಂದಿದ್ದರು. ಇವರು ಅ.೨೭ ರಂದು ಬೆಳಗ್ಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Exit mobile version