Home Advertisement
Home ನಮ್ಮ ಜಿಲ್ಲೆ ಗುಜರಾತ್ ಸೋಲಿಗೆ ಮೋದಿ ಅಲೆಯಲ್ಲ, ಆಮ್ ಆದ್ಮಿ ಕಾರಣ: ಸತೀಶ

ಗುಜರಾತ್ ಸೋಲಿಗೆ ಮೋದಿ ಅಲೆಯಲ್ಲ, ಆಮ್ ಆದ್ಮಿ ಕಾರಣ: ಸತೀಶ

0
93

ಬೆಳಗಾವಿ: ಗುಜರಾತ್‌ನಲ್ಲಿ ಕಾಂಗ್ರೆಸ್ ಸೋಲಿಗೆ ಆಮ್ ಆದ್ಮಿ ಪಕ್ಷವೇ ಕಾರಣವಾಗಿದ್ದು, ಶೇ. 13ರಷ್ಟು ಕಾಂಗ್ರೆಸ್ ಮತಗಳನ್ನು ಆಮ್ ಆದ್ಮಿ ಪಾರ್ಟಿ ಪಡೆದುಕೊಂಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.
ಬೆಳಗಾವಿಯ ಜಾಧವನಗರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಜರಾತ್‌ನಲ್ಲಿ ಇಷ್ಟು ಕಡಿಮೆ ಸ್ಥಾನ ಬರಬಹುದು ಎಂದು ನಾವು ನಿರೀಕ್ಷೆ ಕೂಡ ಮಾಡಿರಲಿಲ್ಲ. ಕಾಂಗ್ರೆಸ್ ಹಿನ್ನೆಡೆಗೆ ಕಾರಣ ಆಮ್ ಆದ್ಮಿ ಪಕ್ಷ ಕಾರಣ. ಆಪ್ ಪಕ್ಷ ಗುಜರಾತ್‌ನಲ್ಲಿ ಕಾಂಗ್ರೆಸ್‌ನ ವೋಟ್ ಬ್ಯಾಂಕ್‌ಅನ್ನು ಪಡೆದಿದೆ ಎಂದು ತಿಳಿಸಿದರು.
ಗುಜರಾತ್ ಫಲಿತಾಂಶ ಇದೇನೂ ಮೋದಿ ಮ್ಯಾಜಿಕ್ ಅಲ್ಲ, ಅಭಿವೃದ್ಧಿ ಮ್ಯಾಜಿಕ್ ಕೂಡ ಅಲ್ಲ. ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷ ಶೇ. ೧೩ರಷ್ಟು ವೋಟ್ ಪಡೆದಿದೆ. ಆಮ್ ಪಡೆದಿರುವ ಶೇ. 13 ಮತಗಳು ಕಾಂಗ್ರೆಸ್‌ನದ್ದು. ಇದರಿಂದಾಗಿ ಪಕ್ಷಕ್ಕೆ ನೇರವಾಗಿ ಹೊಡೆತ ಬಿದ್ದಿದೆ. ಗುಜರಾತ್‌ನಲ್ಲಿ ಕಾಂಗ್ರೆಸ್ ಪಕ್ಷ 60-70 ಕ್ಷೇತ್ರಗಳಲ್ಲಿ ಗೆಲ್ಲಬೇಕಿತ್ತು ಎಂದರು.
ಗುಜರಾತ್ ಮಾದರಿಗೆ ಸತೀಶ್ ಜಾರಕಿಹೊಳಿ ಮೆಚ್ಚುಗೆ
ಇನ್ನು ಗುಜರಾತ್ ಬಿಜೆಪಿ ರೀತಿಯಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಟಿಕೆಟ್ ಹಂಚಬೇಕು. ಸ್ಟ್ರ್ಯಾಟಜಿ ಮಾಡದೆ ರಾಜ್ಯದಲ್ಲಿ ನಾವು ಚುನಾವಣೆ ಗೆಲ್ಲಲು ಆಗಲ್ಲ. ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಹೊಸಬರಿಗೆ ಟಿಕೆಟ್ ನೀಡಿದೆ. ಹಿಂದಿನ 3 ಚುನಾವಣೆಗಳಲ್ಲಿ 30-40 ಹೊಸಬರಿಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ. ಆದರೆ ನಮ್ಮಲ್ಲಿ ಸೋಲುತ್ತಾರೆ ಎಂದು ಗೊತ್ತಿದ್ದರೂ ಟಿಕೆಟ್ ನೀಡುತ್ತಾರೆ. ಸೀನಿಯರ್ ಅಂತಾ ಟಿಕೆಟ್ ನೀಡುತ್ತೇವೆ. ಗೆಲ್ಲುವ ಹಾಗೆ ಇದ್ದರೆ ಮಾತ್ರ ಹಿರಿಯರಿಗೆ ಟಿಕೆಟ್ ನೀಡಲಿ. ಜಾತಿ ಯುಗ ಮುಗಿದಿದೆ, ಕೆಲಸ ಮಾಡುವುದನ್ನು ಜನ ನೋಡ್ತಾರೆ. ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ತಿಳಿಸಿದರು.
ಇನ್ನು ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷದಂತೆ ಕರ್ನಾಟಕದಲ್ಲೂ ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್‌ಗೆ ಸ್ಪರ್ಧೆ ನೀಡುವ ಬಗ್ಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಜೆಡಿಎಸ್ ಇದೆ. ಜೆಡಿಎಸ್ ಸೀಮಿತ ಕ್ಷೇತ್ರದಲ್ಲಿದೆ. ಗುಜರಾತ್‌ನಲ್ಲಿ ಆಪ್‌ನಿಂದ ಆದಂತಹ ಪರಿಸ್ಥಿತಿ ಕರ್ನಾಟಕದಲ್ಲಿಲ್ಲ, ಜೆಡಿಎಸ್‌ನವರು ಅವರು ಗೆಲ್ಲುವ ಸ್ಥಾನದಲ್ಲಿ ಗೆಲ್ಲುತ್ತಾರೆ. ನಾವು ಎಲ್ಲಿ ಗೆಲ್ಲಬೇಕು ಅಲ್ಲಿ ಗೆಲ್ಲುವಂತಹ ಪ್ರಯತ್ನವನ್ನು ನಾವು ಮಾಡುತ್ತೇವೆ ಎಂದರು.

Previous articleಎಂಇಎಸ್‌ ಸಂಪೂರ್ಣ ಸತ್ತು ಹೋಗಿದೆ: ಲಕ್ಷ್ಮಣ ಸವದಿ
Next articleಅಪ್ರಾಪ್ತ ಬಾಲಕನಿಂದ ಲೈಂಗಿಕ ದೌರ್ಜನ್ಯ