ಗೂಂಡಾ ಕಾಯ್ದೆಯಡಿ ಓರ್ವನ ಬಂಧನ

0
16
ಬಂಧನ

ಹುಬ್ಬಳ್ಳಿ: ನಗರದ ಲಖನ್ @ಲಕ್ಯಾ. ಜಿತು ಬೋಜಗಾರ ಎಂಬಾತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಧಾರವಾಡ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.
ಹುಬ್ಬಳ್ಳಿ ನಗರದ ಲಖನ್ ಕೊಲೆ ಯತ್ನ, ಚಾಕು ಇರಿತ, ಜಾತಿ ನಿಂದನೆ ಸೇರಿದಂತೆ ವಿವಿಧ ಕಾಯ್ದೆಯಡಿ ಹು-ಧಾ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು. ಈತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಧಾರವಾಡದ ಕೇಂದ್ರ ಕಾರಾಗೃಹ ಕಳುಹಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Previous articleಬಿಜೆಪಿ ವಿರುದ್ಧ ಸೆಡ್ಡು ಹೊಡೆದ ಕಾರ್ಯಕರ್ತರು
Next articleಪ.ಜಾತಿ ಪ್ರಮಾಣ ಪತ್ರ ನೀಡದಿದ್ದರೆ ಚುನಾವಣೆ ಬಹಿಷ್ಕಾರ