ಗೆಲ್ಲುವ ಸೀಟನ್ನು ಎಲ್ಲರೂ ಕೇಳುತ್ತಾರೆ

0
14

ಮಂಗಳೂರು: “ರಾಜಕೀಯ ಎಂದರೆ ಅಸಮಾಧಾನಗಳು ಇರುತ್ತದೆ. ಗೆಲ್ಲುವ ಸೀಟನ್ನು ಎಲ್ಲರೂ ಕೇಳುತ್ತಾರೆ. ಸೀಟು ಕೇಳುವಾಗ ಗೊಂದಲಗಳು ಆಗಿಯೇ ಆಗುತ್ತದೆ. ಇದಕ್ಕೂ ಚುನಾವಣೆಗೂ ಯಾವುದೇ ಸಂಬಂಧ ಇರುವುದಿಲ್ಲ” ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ನೆಟ್ಟಣ ಕಿದು ಸಿಪಿಐಆರ್ ಕಾರ್ಯಕ್ರಮದಲ್ಲಿ ಭಾಗಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ನಮ್ಮ ಕೇಂದ್ರದ ಚುನಾವಣಾ ಮಂಡಳಿ ಯಾವ ನಿರ್ಧಾರ ಕೈಗೊಳ್ಳುತ್ತದೆಯೋ ಅದಕ್ಕೆ ಬದ್ಧರಾಗಿದ್ದೇವೆ ಎಂದರು. ನೀವು ಸ್ಪರ್ಧೆ ಮಾಡುತ್ತೀರಾ ಎಂಬ ಪ್ರಶ್ನೆಗೆ, ನಾನು ಸ್ಪರ್ಧೆ ಮಾಡಿಯೇ ಮಾಡುತ್ತೇನೆ ಎಂದು ನಗುತ್ತಾ ಉತ್ತರಿಸಿದ್ದಾರೆ
ಇನ್ನೊಂದೆಡೆ ಚಿಕ್ಕಮಗಳೂರು ಬಿಜೆಪಿ ಪಕ್ಷದ ಕಚೇರಿಯಲ್ಲಿ ನಿನ್ನೆ ನಡೆದ ಸಭೆಯಲ್ಲಿ, “ಹಾಲಿ ಸಂಸದೆ ವಿರುದ್ಧ ಬಿಜೆಪಿ ಮುಖಂಡರು, ಕಾರ್ಯಕರ್ತರ ಅಸಮಾಧಾನ ಸ್ಪೋಟಗೊಂಡಿದ್ದು, ಪಕ್ಷದ ನಾಯಕರು ಸಭೆಯಲ್ಲಿ ಮಾತು ಆರಂಭಿಸುತ್ತಿದ್ದಂತೆ ‘ಗೋ ಬ್ಯಾಕ್’ ಶೋಭಾ ಘೋಷಣೆ ಕೂಗಿ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಬಾರದು, ಮಾಜಿ ಶಾಸಕ ಸಿ.ಟಿ.ರವಿ ಅವರಿಗೆ ಈ ಬಾರಿಯ ಲೋಕಸಭೆ ಟಿಕೆಟ್ ನೀಡಬೇಕು” ಎಂದು ಆಗ್ರಹಿಸಿದ್ದರು.

Previous articleಗೀತಾ ಗೆಲುವು ಸಾಧಿಸುವುದರಲ್ಲಿ ಸಂಶಯವಿಲ್ಲ
Next articleವೃದ್ಧ ಮಾವನನ್ನು ಕೂಡಿ ಹಾಕಿ ಥಳಿಸಿದ ಸೊಸೆ