Home ಅಪರಾಧ ಗೆಳೆತನ ನಿರಾಕರಣೆ: ಯುವತಿ ಮೇಲೆ ಹಲ್ಲೆ

ಗೆಳೆತನ ನಿರಾಕರಣೆ: ಯುವತಿ ಮೇಲೆ ಹಲ್ಲೆ

0

ಹುಬ್ಬಳ್ಳಿ: ವಿದ್ಯಾರ್ಥಿನಿಯ ಹತ್ಯೆಯ ಬೆನ್ನಲ್ಲಿಯೇ ಅನ್ಯಕೋಮಿನ ಯುವಕ ಗೆಳೆತನ ನಿರಾಕರಿಸಿದ ಕಾರಣಕ್ಕೆ ಯುವತಿ ಮೇಲೆ ಹಲ್ಲೆ ಮಾಡಿರುವ ಪ್ರಕರಣ ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಯುವತಿ ಹಣ್ಣು ಖರೀದಿಗೆ ಬಂದಾಗ ಯುವಕ ಹಲ್ಲೆ ಮಾಡಿದ್ದಾನೆ ಎಂದು ಯುವತಿ ದೂರು ನೀಡಿದ್ದಾಳೆ ಎಂದು ತಿಳಿದು ಬಂದಿದೆ.

ಕೇಶ್ವಾಪುರ ಠಾಣೆಯ ವ್ಯಾಪ್ತಿಯಲ್ಲಿ ಯುವತಿಗೆ ಯುವಕ ಹಲ್ಲೆ ಮಾಡಿರುವ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿ ಮೇಲಿನ ಹಲ್ಲೆ ಖಂಡಿಸಿ ವಿಶ್ವ ಹಿಂದು ಪರಿಷತ್ ಸಂಘಟನೆ ಕಾರ್ಯಕರ್ತರು ಸೇರಿದಂತೆ ಯುವತಿ ಪೋಷಕರ ಜೊತೆ ಕೆಲವರು ಪ್ರತಿಭಟನೆ ನಡೆಸಿದರು. ಆರೋಪಿ ಬಂಧಿಸಿ ಕಠಿಣ ಕ್ರಮ ಜರುಗಿಸಲು ಆಗ್ರಹಿಸಿದರು.

Exit mobile version