Home ಅಪರಾಧ ಗೋಲ್ಡಿ ಬ್ರಾರ್‌ನ್ನು ಭಯೋತ್ಪಾದಕ ಎಂದು ಘೋಷಿಸಿದ ಕೇಂದ್ರ

ಗೋಲ್ಡಿ ಬ್ರಾರ್‌ನ್ನು ಭಯೋತ್ಪಾದಕ ಎಂದು ಘೋಷಿಸಿದ ಕೇಂದ್ರ

0

ನವದೆಹಲಿ: ಕೆನಡಾ ಮೂಲದ ದರೋಡೆಕೋರ ಗ್ಯಾಂಗ್​​ಸ್ಟರ್ ಗೋಲ್ಡಿ ಬ್ರಾರ್​​ನ್ನು ಕೇಂದ್ರ ಸರಕಾರ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಭಯೋತ್ಪಾದಕ ಎಂದು ಘೋಷಿಸಿದೆ.
ಗೋಲ್ಡಿ ಬ್ರಾರ್ ಎಂದೇ ಜನಪ್ರಿಯರಾಗಿರುವ ಸತೀಂದರ್ಜಿತ್ ಸಿಂಗ್ 2017ರಲ್ಲಿ ವಿದ್ಯಾರ್ಥಿ ವೀಸಾದಲ್ಲಿ ಕೆನಡಾಕ್ಕೆ ಹೋಗಿದ್ದ. ಈತ ಕೊಲೆ, ಸುಲಿಗೆ ಸೇರಿದಂತೆ ತನ್ನ ಅಪರಾಧ ಚಟುವಟಿಕೆಗಳನ್ನು ಅಲ್ಲಿಂದಲೇ ನಡೆಸುತ್ತಿದ್ದ. ಈತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ನಿಕಟ ಸಹಚರ. ಈತ ನಿಷೇಧಿತ ಖಲಿಸ್ತಾನಿ ಸಂಘಟನೆ ಬಬ್ಬರ್ ಖಾಲ್ಸಾ ಇಂಟರ್ ನ್ಯಾಷನಲ್ ಜೊತೆಗೆ ಸಂಬಂಧ ಹೊಂದಿದ್ದಾನೆ ಎಂದು ಗೃಹ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

Exit mobile version