Home Advertisement
Home ತಾಜಾ ಸುದ್ದಿ ಗ್ಯಾರಂಟಿ ಬಣ್ಣ ಬದಲಾಗುತ್ತಿದೆ

ಗ್ಯಾರಂಟಿ ಬಣ್ಣ ಬದಲಾಗುತ್ತಿದೆ

0
136
C T Ravi

ಬೆಂಗಳೂರು: ಗ್ಯಾರಂಟಿ ವಿಚಾರವಾಗಿ ಒಂದೇ ದಿನದಲ್ಲಿ ಬಣ್ಣ ಬದಲಿಸುತ್ತಿರುವ ಕಾಂಗ್ರೆಸ್‌ ಇನ್ನು ಒಂದು ವರ್ಷದಲ್ಲಿ ಅದೆಷ್ಟು ಬಣ್ಣ ಬದಲಾಯಿಸಬಹುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರಶ್ನಿಸಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಎಲ್ಲ ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆ ಎಂದಿದ್ದವರು ಈಗ 2022-23ರಲ್ಲಿ ಪದವಿ ಪಡೆದವರಿಗೆ ಮಾತ್ರ ಎಂದು ಹೇಳುತ್ತಿದ್ದಾರೆ. ಖಾಸಗಿ ನೌಕರಿ ಮಾಡುತ್ತಿದ್ದರೆ ಭತ್ಯೆ ಇಲ್ಲ ಎನ್ನುತ್ತಿದ್ದಾರೆ. ಯಾರೋ ಬಿಲ್ ಕಲೆಕ್ಟರ್ ಬಂದು ಬಿಲ್ ಕೇಳಿದರೆ, ಆ ಧೈರ್ಯ ಮಾಡಿದರೆ ಅದು ಸಿಎಂ ಆದೇಶಕ್ಕೆ ವಿರುದ್ಧವಾಗುತ್ತದೆ. ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಹುಷಾರ್, ಬಿಲ್ ಮುಖ್ಯಮಂತ್ರಿಗಳಿಗೆ ಕಳಿಸಿ ಎನ್ನಬೇಕು. ಯಾರೂ ವಿದ್ಯುತ್ ಬಿಲ್ ಕಟ್ಟಬಾರದು ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷ ಘೋಷಿಸಿದಂತೆ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್, ಗೃಹಿಣಿಯರಿಗೆ 2 ಸಾವಿರ, ಮಹಿಳೆಯರಿಗೆ ಉಚಿತ ಬಸ್‌ ಪಾಸ್‌, ಬಿಪಿಎಲ್ ಕಾರ್ಡ್‍ದಾರರಿಗೆ 10 ಕೆಜಿ ಅಕ್ಕಿ ಎಲ್ಲವನ್ನು ಕೊಡಲೇಬೇಕು ಬೇಕು ಎಂದರು.

Previous articleನನಗೆ ಜೀರೋ ಟ್ರಾಫಿಕ್ ಸೌಲಭ್ಯ ಬೇಡ
Next articleಪ್ಲೇಆಫ್​ನಿಂದ ಹೊರಬಿದ್ದ ಆರ್​ಸಿಬಿ