7 ನಿಮಿಷದಲ್ಲಿ 75 ಸಾವಿರ ಹಣ ಕದ್ದೊಯದ ಕಳ್ಳರು
ಬೆಳಗಾವಿ : ಮೂವರು ಮುಸುಕುಧಾರಿಗಳು ಗ್ಯಾಸ್ ಕಟರ್ ಬಳಸಿ ಎಟಿಎಂ ಹಣ ಕಳ್ಳತನ ಮಾಡಿರುವ ಘಟನೆ ನಡೆದಿದೆ.
ಈ ಕುರಿತಂತೆ ಮಾತನಾಡಿರುವ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಮಾಹಿತಿ ನೀಡಿದ್ದಾರೆ ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಮೂವರು ಆರೋಪಿಗಳು ಕಟರ್ ಉಪಯೋಗಿಸಿ ಕಳ್ಳತನ ಮಾಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೊದಲು ಆರೋಪಿಗಳು ಸಿಸಿಟಿವಿ ಕ್ಯಾಮರಾಗೆ ಸ್ಪ್ರೇ ಮಾಡಿ ಬಂದ್ ಮಾಡಿದ್ದಾರೆ. ತಕ್ಷಣ ಬ್ಯಾಂಕ್ ಕಂಟ್ರೋಲ್ ರೂಮ್ ಗೆ ಮಾಹಿತಿ ಹೋಗಿದೆ. ಅವರು ನಮ್ಮ ಪೊಲೀಸರಿಗೆ ತಿಳಿಸಿದ್ದಾರೆ. ನಮ್ಮವರು ಸ್ಥಳಕ್ಕೆ ಬರುವಷ್ಟರಲ್ಲಿ ಹಣ ಕಳ್ಳತನ ಮಾಡಿಕೊಂಡು ಆರೋಪಿಗಳು ಪರಾರಿಯಾಗಿದ್ದಾರೆ. ಎಟಿಎಂಗೆ ಸೆಕ್ಯೂರಿಟಿ ಸಿಬ್ಬಂದಿ ಇರಲಿಲ್ಲ. ಆರೋಪಿಗಳ ಪತ್ತೆಗೆ ಮೂರು ತಂಡ ರಚಿಸಲಾಗುವುದು. ಶೀಘ್ರವೇ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುತ್ತೇವೆ, ಸಾಂಬ್ರಾ ಗ್ರಾಮದ ಮುಖ್ಯ ರಸ್ತೆಯಲ್ಲಿ ಇರುವ ಎಸ್ಬಿಐ ಬ್ಯಾಂಕ್ ಎಟಿಎಂ ಇದಾಗಿದ್ದು, ಕೇವಲ 7 ನಿಮಿಷದಲ್ಲಿ ಕಳ್ಳರು ಗ್ಯಾಸ್ ಕಟರ್ ಬಳಸಿ ಎಟಿಎಂ ಕಳ್ಳತನ ಮಾಡಿದ್ದಾರೆ. ಎಟಿಎಂನಲ್ಲಿದ್ದ 75,600 ರೂಪಾಯಿ ಹಣ ಕದ್ದೊಯ್ದಿದ್ದಾರೆ ಎಂದರು.